ಕರ್ನಾಟಕ

karnataka

ETV Bharat / snippets

ಬೆಂಗಳೂರು: MBBS ವಿದ್ಯಾರ್ಥಿ ಆತ್ಮಹತ್ಯೆ

suicide
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Jun 10, 2024, 10:11 PM IST

ಬೆಂಗಳೂರು:ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಶಿವಾಜಿ ನಗರದ ಅಟಲ್ ಬಿಹಾರಿ ವೈದ್ಯಕೀಯ ಕಾಲೇಜಿನಲ್ಲಿ ಮೊದಲ ವರ್ಷದಲ್ಲಿ ಓದುತ್ತಿದ್ದ ರಾಜಸ್ಥಾನದ ಲೊಕೇಂದ್ರನಾಥ ಕುಮಾರ್ ಸಿಂಗ್(22) ಸಾವನ್ನಪ್ಪಿದ್ದಾರೆ.

ಕಾಲೇಜಿನ ಹಾಸ್ಟೆಲ್​ನಲ್ಲಿ ಸ್ನೇಹಿತರೊಂದಿಗೆ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿ ಬಾಗಿಲು ತೆರೆಯದೇ ಇದ್ದುದರಿಂದ ಅನುಮಾನಗೊಂಡ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದು ಕೊಠಡಿಯೊಳಗೆ ಹೋದಾಗ ಶವ ಪತ್ತೆಯಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಮೊಬೈಲ್ ಹಾಗೂ ಲ್ಯಾಪ್ ಟಾಪ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಚಾಮರಾಜನಗರ: ನಾಪತ್ತೆಯಾಗಿದ್ದ ರಿಯಲ್​ ಎಸ್ಟೇಟ್​ ಉದ್ಯಮಿ ಬಿಳಿಗಿರಿರಂಗನ ಬೆಟ್ಟದಲ್ಲಿ ಆತ್ಮಹತ್ಯೆ - BUSINESS MAN SUICIDE

ABOUT THE AUTHOR

...view details