ಕರ್ನಾಟಕ

karnataka

ತುಮಕೂರು: ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

By ETV Bharat Karnataka Team

Published : Sep 4, 2024, 4:36 PM IST

rape case
ಸಾಂದರ್ಭಿಕ ಚಿತ್ರ (ETV Bharat)

ತುಮಕೂರು:ಅಪ್ರಾಪ್ತ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯು ತನ್ನ ತಂದೆಯಿಂದಲೇ ಅತ್ಯಾಚಾರಕ್ಕೊಳಗಾದ ಬಗ್ಗೆ ಪ್ರಕರಣ ದಾಖಲಾಗಿದೆ.

ಕೂಲಿ ಕೆಲಸಕ್ಕಾಗಿ ಉತ್ತರ ಪ್ರದೇಶದಿಂದ ತುಮಕೂರು ಜಿಲ್ಲೆಗೆ ಬಂದ ಕುಟುಂಬದ ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡು ಬಂದಿತ್ತು. ಹೀಗಾಗಿ, ಅಪ್ರಾಪ್ತೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ, ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯು ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಪೋಕ್ಸೋ ಕಾಯಿದೆ ಮತ್ತು ಅತ್ಯಾಚಾರ ಆರೋಪ ಅಡಿ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ಮಂಗಳೂರು: ಅತ್ಯಾಚಾರ ಆರೋಪ ಪ್ರಕರಣ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿ ಖುಲಾಸೆ - Rape Case

ABOUT THE AUTHOR

...view details