ದಾವಣಗೆರೆ:ಜಿಲ್ಲೆಯ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಹಾಗೂ ಎಸ್ಡಿಎ (ಎರಡನೇ ವಿಭಾಗದ ಸಹಾಯಕ) ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಬಿ. ಅನ್ನಪೂರ್ಣ ಹಾಗೂ ಎಸ್ಡಿಎ ಲಕ್ಕಪ್ಪ ಹಿಟ್ಟಿನ ಗಿರಣಿ ಮನೆಗೆ ಇ-ಸ್ವತ್ತು ಮಾಡಿ ಕೊಡಲು 15 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ, ಎಸ್ಡಿಎ ಲೋಕಾಯುಕ್ತ ಬಲೆಗೆ
Published : Jun 21, 2024, 1:47 PM IST
ದಾವಣಗೆರೆ ನಗರದ ಬೇತೂರು ರಸ್ತೆಯ ನಿವಾಸಿ ಚಂದ್ರಶೇಖರ ಎಂಬುವವರು ತಮಗೆ ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟಿದ್ದರ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಬೆನ್ನಲ್ಲೇ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ ಇನ್ಸ್ಪೆಕ್ಟರ್ಗಳಾದ ಎಚ್.ಎಸ್. ರಾಷ್ಟ್ರಪತಿ, ಪ್ರಭು ಸೂರಿನ್ ದಾಳಿ ನಡೆಸಿದ್ದರು. ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರಿಂದ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಾರಾಗೃಹ ಶಿಕ್ಷೆ