ಕರ್ನಾಟಕ

karnataka

ಹಾವೇರಿ: ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಯುವಕರ ಸಾವು

By ETV Bharat Karnataka Team

Published : Jul 13, 2024, 10:37 AM IST

car accident
ಅಪಘಾತಕ್ಕೀಡಾದ ಕಾರು (ETV Bharat)

ಹಾವೇರಿ:ಶಿಗ್ಗಾಂವಿ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿ ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಂಖ್ಯೆ ನಾಲ್ಕಕ್ಕೇರಿದೆ.

ಶಿವನಗೌಡ ಯಲ್ಲನಗೌಡ್ರ (20) ಮತ್ತು ಕಲ್ಮೇಶ ಮಾನೋಜಿ (26) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟವರು. ಇಂದು ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್​​ ಕಾರು ಬೇವಿನ ಮರಕ್ಕೆ ಡಿಕ್ಕಿ ಹೊಡೆದಿತ್ತು. ಶಿಗ್ಗಾಂವಿ ಬಳಿ ನಡೆದ ಈ ಅಪಘಾತದಲ್ಲಿ ಸ್ಥಳದಲ್ಲಿಯೇ ನೀಲಪ್ಪ ಮೂಲಿಮನಿ (23) ಹಾಗೂ ಸುದೀಪ್ ಕೋಟಿ (18) ಮೃತಪಟ್ಟಿದ್ದರು.

ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ಬೆಳಿಗ್ಗೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ನಂದಗಡಕ್ಕೆ 7 ಜನ ಯುವಕರ ತಂಡ ಹೊರಟಿತ್ತು. ಮುಂದೆ ಇದ್ದ ವಾಹನ ಓವರ್ ಟೇಕ್ ಮಾಡಲು ಹೋಗಿ ಕಾರು ಬೇವಿನ ಮರಕ್ಕೆ ಡಿಕ್ಕಿ ಹೊಡೆದಿತ್ತು. ಈ ಬಗ್ಗೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details