ಕರ್ನಾಟಕ

karnataka

ETV Bharat / snippets

ಹಾಲಿನ ಖರೀದಿ ದರ ಕಡಿತಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ (ETV Bharat)

By ETV Bharat Karnataka Team

Published : Sep 3, 2024, 10:57 PM IST

ಬೆಂಗಳೂರು: ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮವಹಿಸಿ, ಹಾಲು ಖರೀದಿ ದರ ಕಡಿತಕ್ಕೆ ತಡೆವೊಡ್ಡಬೇಕು ಎಂದು ಮಾಧ್ಯಮ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನದಾತನ ಮೇಲೆ ಬರೆ ಮೇಲೆ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಸಚಿವರು ಕಟುವಾಗಿ ಟೀಕಿಸಿದ್ದಾರೆ.

ಕೆಲ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿವೆ. ಹೊಸ ಖರೀದಿ ದರ 30.50 ರಿಂದ 29 ರೂ.ಗೆ ಕುಸಿದಿದೆ. ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರ್ಕಾರ ಎನ್ನುವ ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದಿದ್ದಾರೆ.

ABOUT THE AUTHOR

...view details