ಹುಬ್ಬಳ್ಳಿ:ಹಳೆ ಹುಬ್ಬಳ್ಳಿಯ ಆನಂದನಗರ ರಸ್ತೆಯ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ವ್ಯಕ್ತಿ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಗುರುತು ಪತ್ತೆಯಾಗಿಲ್ಲ. ಸುಮಾರು 30-35 ವರ್ಷ ವಯಸ್ಸಿನವರೆಂದು ಹೇಳಲಾಗಿದೆ. ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಹೀಗಾಗಿ ಮದ್ಯ ಸೇವಿಸಿ ಕಾಲು ಜಾರಿ ಬಿದ್ದಿರುವ ಅನುಮಾನ ವ್ಯಕ್ತಪಡಿಸಿದ್ದಾರೆ.