ಕರ್ನಾಟಕ

karnataka

By ETV Bharat Karnataka Team

Published : 14 hours ago

ETV Bharat / snippets

ಗ್ರಾಮ ಆಡಳಿತಾಧಿಕಾರಿ ಕನ್ನಡ ಕಡ್ಡಾಯ ಪರೀಕ್ಷೆ ಯಶಸ್ವಿ: ಶೇ.80ರಷ್ಟು ಅಭ್ಯರ್ಥಿಗಳು ಹಾಜರು

kannada exam
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ETV Bharat)

ಬೆಂಗಳೂರು:ಗ್ರಾಮ ಆಡಳಿತಾಧಿಕಾರಿ (ವಿಎಒ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ‌ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ಅಯೋಜಿಸಿದ್ದ ಕನ್ನಡ ಕಡ್ಡಾಯ ಪರೀಕ್ಷೆ ಸುಗಮವಾಗಿ ನಡೆದಿದೆ. ಪರೀಕ್ಷೆಗೆ ಶೇ.80ರಷ್ಟು ಮಂದಿ ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಬೆಂಗಳೂರಿನ‌ 115 ಕೇಂದ್ರ ಸೇರಿ ರಾಜ್ಯಾದ್ಯಂತ 1,410 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ, ಪರೀಕ್ಷೆ ನಡೆದಿದೆ. ಒಟ್ಟು 5.75 ಲಕ್ಷ ಅಭ್ಯರ್ಥಿಗಳ ಪೈಕಿ, 4.53 ಲಕ್ಷ ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್ 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ. ವಯೋಮಿತಿ ಸಡಿಲಿಕೆಯ ಅನುಕೂಲ ಪಡೆಯುವವರ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ.26ರಂದು ಕನ್ನಡ ಕಡ್ಡಾಯ ಪರೀಕ್ಷೆ ಇದೆ. ಅದರ ನಂತರ ಅವರೂ ಕೂಡ ಅ.27ರಂದು ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೆಚ್.ಪ್ರಸನ್ನ ಹೇಳಿದ್ದಾರೆ.

ABOUT THE AUTHOR

...view details