ETV Bharat / assembly-elections

ದಾವಣಗೆರೆ ಉತ್ತರ ಕ್ಷೇತ್ರ: ಕಾಂಗ್ರೆಸ್​ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಕೆ - ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ತಂದೆ ಶಾಮನೂರು ಶಿವಶಂಕರಪ್ಪ ಅವರಿಗಿಂತ ಮೊದಲೇ ಮಗ ಎಸ್.ಎಸ್.ಮಲ್ಲಿಕಾರ್ಜುನ ಅವರು ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದರು.

SS Mallikarjuna filed nomination
ಎಸ್ ಎಸ್ ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಕೆ
author img

By

Published : Apr 13, 2023, 7:30 PM IST

Updated : Apr 13, 2023, 7:51 PM IST

ದಾವಣಗೆರೆ: ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ ಅವರು ಅಚ್ಚರಿ ಎಂಬಂತೆ ಇಂದು ನಾಮಪತ್ರ ಸಲ್ಲಿಸಿದರು. ಯಾವುದೇ ಮೆರವಣಿಗೆ ನಡೆಸದೇ ಸರಳವಾಗಿ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿರುವ ಉತ್ತರ ಕ್ಷೇತ್ರದ ಕಚೇರಿಗೆ ಭೇಟಿ ನೀಡಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ ಜೊತೆಯಲ್ಲಿದ್ದರು.

ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮೂಲಕ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಇವರ ತಂದೆ, ಕಾಂಗ್ರೆಸ್ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರಿನ್ನೂ ನಾಮಪತ್ರ ಸಲ್ಲಿಸಿಲ್ಲ. ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಕಟ್ಟಿ ಹಾಕಲು ಲಿಂಗಾಯತ ಅಸ್ತ್ರ ಬಳಕೆ ಮಾಡಿರುವ ಬಿಜೆಪಿ ಲೋಕಿಕೆರೆ ನಾಗರಾಜ್ ಅವರನ್ನು ಕಣಕ್ಕಿಳಿಸಿದೆ. ನಿನ್ನೆ ಬಿಜೆಪಿ ಘೋಷಣೆ ಮಾಡಿದ ಎರಡನೇ ಪಟ್ಟಿಯಲ್ಲಿ ಲೋಕಿಕೆರೆ ನಾಗರಾಜ್ ಅವರ ಹೆಸರು ಘೋಷಣೆಯಾಗಿತ್ತು.

ಜೆಡಿಎಸ್ ಅಭ್ಯರ್ಥಿ ವೀರಭದ್ರಪ್ಪ ಹಾಲಹರವಿ

ಹುಬ್ಬಳ್ಳಿ ಪೂರ್ವ ಮತಕ್ಷೇತ್ರ: ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದು, ಜೆಡಿಎಸ್‌ಗೆ ಜನ ಸ್ಪಂದನೆ ಸಿಕ್ಕಿದೆ ಎಂದು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೀರಭದ್ರಪ್ಪ ಹಾಲಹರವಿ ಹೇಳಿದರು. ನಗರದಲ್ಲಿ ಚುನಾವಣಾ ಅಧಿಕಾರಿಗಳಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಭವಿಷ್ಯವಾಣಿ ನೋಡಿ ನಾಮಪತ್ರ ಸಲ್ಲಿಸುತ್ತಿಲ್ಲ. ನನ್ನ ಕಾರ್ಯಕರ್ತರೇ ನನ್ನ ಭವಿಷ್ಯ ನಿರ್ಧಾರ ಮಾಡುತ್ತಾರೆ ಎಂದು ನುಡಿದರು.

ಎರಡು ದಿನಗಳ ನಂತರ ಬಿ ಫಾರ್ಮ್‌ನೊಂದಿಗೆ ಮತ್ತೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಪತ್ನಿ ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಹುಬ್ಬಳ್ಳಿಯ ಆರಾಧ್ಯದೈವ ಶ್ರೀ ಸಿದ್ಧಾರೂಢರ ಮಠಕ್ಕೆ ತೆರಳಿ ಅಲ್ಲಿಂದ ಪ್ರಚಾರ ಕಾರ್ಯ ಆರಂಭಿಸುತ್ತೇನೆ. ಮತ್ತೊಮ್ಮೆ ನಾನು ಜನ ಬೆಂಬಲದೊಂದಿಗೆ ಜಯ ಗಳಿಸುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‌ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ್ ಹುಣಸಿಮರದ ಹಾಗೂ ಹಾಲಹರವಿ ಪತ್ನಿ ಸೇರಿದಂತೆ ಬೆಂಬಲಿಗರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗೋಕಾಕ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಮೇಶ ಜಾರಕಿಹೊಳಿ

Last Updated : Apr 13, 2023, 7:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.