ETV Bharat / assembly-elections

ಕಾಂಗ್ರೆಸ್​ನಲ್ಲಿ ಶುರುವಾಯಿತು ಸಿಎಂ ಆಯ್ಕೆ ಕಸರತ್ತು; ಯಾರಿಗೆ ಸಿಗಲಿದೆ ಪಟ್ಟ! - ವಿಧಾನಸಭಾ ಚುನಾವಣೆ ಕಾಂಗ್ರೆಸ್​ ಪಕ್ಷ

ಆರಂಭಿಕ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್​ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕೂಡ ಹೆಚ್ಚಾಗಲಿದೆ.

Congress get lead in Karnataka Election Result who will become cm Candidate

author img

By

Published : May 13, 2023, 10:05 AM IST

ಬೆಂಗಳೂರು: ವಿಧಾನಸಭಾ ಚುನಾವಣೆ ಕಾಂಗ್ರೆಸ್​ ಪಕ್ಷ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಾಗಿದೆ. ಮುನ್ನಡೆಯ ಫಲಿತಾಂಶವನ್ನು ಆಧಾರಿಸಿ ಕಾಂಗ್ರೆಸ್​ ಪಾಳೆಯದಲ್ಲಿ ಈಗ ಸಂಭ್ರಮ ಮನೆ ಮಾಡಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಬಗ್ಗೆ ಚರ್ಚೆ ಗಂಭೀರವಾಗಿ ನಡೆಯುತ್ತಿದೆ. ಅತಂತ್ರ ಫಲಿತಾಂಶ ಬಂದರೆ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಗೊಂದಲದಲ್ಲಿದ್ದ ಕಾಂಗ್ರೆಸ್​ ಹೈ ಕಮಾಂಡ್​​ ಮತ್ತು ಪಕ್ಷದ ಮುಖಂಡರಲ್ಲಿ ಇದೀಗ ಮುನ್ನಡೆಯ ಫಲಿತಾಂಶದ ಹಿನ್ನಲೆಯಲ್ಲಿ ಸ್ಪಷ್ಟತೆ ಸಿಗುತ್ತಿದೆ.

ಯಾರಾಗ್ತಾರೆ ಸಿಎಂ ಅಭ್ಯರ್ಥಿ: ಕಾಂಗ್ರೆಸ್​ ಪಕ್ಷದಲ್ಲಿ ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ವರುಣಾ ಕ್ಷೇತ್ರದಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಗೆದ್ದರೆ, ಅವರು ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಸ್ಫರ್ಧಿಯಾಗಲಿದ್ದಾರೆ. ಅದರಂತೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಹ ಸಿದ್ದರಾಮಯ್ಯ ಬದಲಿಗೆ ತಮ್ಮನ್ನೆ ಮುಖ್ಯಮಂತ್ರಿ ಮಾಡುವಂತೆ ಪಕ್ಷದ ಹೈ ಕಮಾಂಡ್​ ಮೇಲೆ ಒತ್ತಡವನ್ನು ಈಗಾಗಲೇ ಹಾಕಿದ್ದಾರೆ.

ವೋಟಿಂಗ್​ ಮೇಲೆ ಆಯ್ಕೆ: ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ, ಹಿರಿಯ ಕಾಂಗ್ರೆಸ್​ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂಬುದು ಕಾಂಗ್ರೆಸ್​ ಹೈಕಮಾಂಡ್​​ಗೆ ಜಿಜ್ಞಾಸೆ ಮೂಡಿದೆ. ಚುನಾವಣೆ ಸಂಪೂರ್ಣ ಫಲಿತಾಂಶ ಪ್ರಕಟವಾದ ನಂತರ ಶಾಸಕಾಂಗ ಸಭೆಯಲ್ಲಿ ಶಾಸಕರ ವೋಟಿಂಗ್​​​​ ಆಧಾರದ ಮೇಲೆ ಮುಖ್ಯಮಂತ್ರಿ ಆಯ್ಕೆ ಮಾಡುವುದು ಉತ್ತಮ ಎಂಬ ತೀರ್ಮಾನಕ್ಕೆ ಪಕ್ಷದ ಹೈ ಕಮಾಂಡ್​ ಬಂದಂತೆ ಇದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೆಚ್ಚಿನ ಶಾಸಕರ ಒಲವು ಯಾರಿಗೆ ಇರುತ್ತದೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಚುನಾಯಿಸುವಂತೆ ಸಿದ್ದರಾಮಯ್ಯ ಹೈ ಕಮಾಂಡ್​​ ಮೇಲೆ ಒತ್ತಡ ಹೇರಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ಈಟಿವಿ ಭಾರತ್​ ಕನ್ನಡಕ್ಕೆ ತಿಳಿಸಿದೆ.

ಶಾಸಕರ ಬೆಂಬಲಕ್ಕೆ ಕಸರತ್ತು: ಚುನಾವಣೆಯಲ್ಲಿ ಗೆಲ್ಲುವ ಭರವಸೆ ಇರುವ, ಕಾಂಗ್ರೆಸ್​ ಅಭ್ಯರ್ಥಿಗಳ ಬೆಂಬಲವನ್ನು ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರು ತಮ್ಮದೇ, ನೆಟ್​ವರ್ಕ್​ಗಳ ಮೂಲಕ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಚುನಾವಣೆ ಮೂಲಕವೇ ಆಯ್ಕೆ ಮಾಡುವುದು ಅಂತಿಮವಾದರೆ, ಶಾಸಕರ ಪ್ರತಿ ವೋಟು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರಿಗೆ ಅತ್ಯಗತ್ಯವಾಗಿರುತ್ತದೆ. ಈ ಹಿನ್ನಲೆಯಲ್ಲಿ ಪ್ರತಿ ಕಾಂಗ್ರೆಸ್​ ಅಭ್ಯರ್ಥಿಗಳ ಬೆಂಬಲ ಪಡೆಯಲು ಸಿದ್ದರಾಮಯ್ಯನವರ ಗುಂಪು ಮತ್ತು ಡಿಕೆಶಿ ಅವರ ಗುಂಪು ಪ್ರಯತ್ನದಲ್ಲಿ ತೊಡಗಿದೆ.

ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯೂ ಸೇರಿದಂತೆ ಕಾಂಗ್ರೆಸ್​ ಸರ್ಕಾರದ ರಚನೆ ಪ್ರಕ್ರಿಯೆ ಸುಗಮಗೊಳಿಸಲು ಹೈಕಮಾಂಡ್​, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್​ ಸಿಂಗ್​ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್​ ಅವರನ್ನು ಪ್ರತಿನಿಧಿಯನ್ನಾಗಿ ಕಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರು ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದು, ಅವರು ಸಹ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ, ಸರ್ಕಾರ ರಚನೆಯಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಧಾನಸಭೆಗೆ ಅತಿ ಹೆಚ್ಚು ಬಾರಿ ಆಯ್ಕೆಯಾದ ನಾಯಕರು: ಏನಾಗಲಿದೆ ಇವರ ಭವಿಷ್ಯ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.