ETV Bharat / assembly-elections

ಕಾಂಗ್ರೆಸ್ ಟಿಕೆಟ್ ಘೋಷಣೆ: ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ಬಂಡಾಯ ಸ್ಫೋಟ - Venkatesh Hegade Hosabale

ಶಿರಸಿ-ಸಿದ್ದಾಪುರ ವಿಧಾನಸಭಾ‌ ಕ್ಷೇತ್ರಕ್ಕೆ ಕಾಂಗ್ರೆಸ್​ನಿಂದ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಶಿರಸಿಯಲ್ಲಿ ಬಂಡಾಯ ಕಾಣಿಸಿಕೊಂಡಿದೆ.

Venkatesh Hegade Hosabale
ವೆಂಕಟೇಶ್ ಹೆಗಡೆ ಹೊಸಬಾಳೆ
author img

By

Published : Apr 7, 2023, 10:01 PM IST

ಕಾಂಗ್ರೆಸ್​ ಬಂಡಾಯ ಅಭ್ಯರ್ಥಿ ವೆಂಕಟೇಶ್ ಹೆಗಡೆ ಹೊಸಬಾಳೆ ಮಾತನಾಡಿದರು.

ಉತ್ತರ ಕನ್ನಡ: ನಿನ್ನೆಯಷ್ಟೇ ಭೀಮಣ್ಣ ನಾಯ್ಕ್ ಅವರನ್ನು ಶಿರಸಿ-ಸಿದ್ದಾಪುರ ವಿಧಾನಸಭಾ‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು. ಇದರ ಬೆನ್ನಲ್ಲೇ‌‌ ಕಾಂಗ್ರೆಸ್​ಗೆ ಭಿನ್ನಮತದ ಬಿಸಿ ಜೋರಾಗಿಯೇ ತಟ್ಟಿದೆ. ಇದೀಗ ಭೀಮಣ್ಣ ನಾಯ್ಕ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಾಂಗ್ರೆಸ್​ನ ವೆಂಕಟೇಶ್ ಹೆಗಡೆ ಹೊಸಬಾಳೆ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.

''ಹಲವು ಬಾರಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಭೀಮಣ್ಣ ನಾಯ್ಕ್ ಸೋಲು ಅನುಭವಿಸಿದ್ದರು. ಈ ಬಾರಿ ಕ್ಷೇತ್ರದಲ್ಲಿ ಹಲವು ಆಕಾಂಕ್ಷಿಗಳಿದ್ದು, ಅವರಲ್ಲಿ‌ ಯಾರಿಗಾದರು‌‌ ಟಿಕೆಟ್ ನೀಡಬಹುದಿತ್ತು. ಆದರೆ, ಈ ಬಾರಿ ಕಾಂಗ್ರೆಸ್ ಮತ್ತೆ‌ ಭೀಮಣ್ಣ ಅವರಿಗೆ ಟಿಕೆಟ್ ನೀಡಿರುವುದು ನನಗೆ ಅಸಮಾಧಾನ‌‌ ತಂದಿದೆ'' ಎಂದು ವೆಂಕಟೇಶ್ ಹೆಗಡೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವೆಂಕಟೇಶ ಹೆಗಡೆ ಹೊಸಬಾಳೆ ಹೇಳಿದ್ದೇನು?: ''ನಾನು ಹಲವಾರು ವರ್ಷದಿಂದ ಕಾಂಗ್ರೆಸ್​ನಲ್ಲಿದ್ದು ಕೆಲಸ ಮಾಡಿದ್ದೇನೆ. ಜೊತೆಗೆ ಜನರ ವಿಶ್ವಾಸ ಗಳಿಸಿದ್ದೇನೆ. ಅದಕ್ಕಾಗಿ ನಾನು ಈ ಬಾರಿ ಕಾಂಗ್ರೆಸ್​ನಿಂದ ಬಂಡಾಯ ಅಭ್ಯರ್ಥಿಯಾಗಿ ನಿಲ್ಲುತ್ತಿದೇನೆ. ಜನರ ಬೆಂಬಲ ನನಗೆ ಇದೆ. 25,000 ಮತಗಳ ಅಂತರದಿಂದ ಗೆಲ್ಲುತ್ತೇನೆ'' ಎಂದು ವೆಂಕಟೇಶ ಹೆಗಡೆ ಹೊಸಬಾಳೆ ವಿಶ್ವಾಸ ವ್ಯಕ್ತಪಡಿಸಿದರು.

ಕಾಗೇರಿ ಸೋಲಿಸುವುದು ಸುಲಭದ‌‌ ಮಾತಲ್ಲ: ಶಿರಸಿ-ಸಿದ್ದಾಪುರ ವಿಧಾನಸಭಾ‌ ಕ್ಷೇತ್ರದಲ್ಲಿ ಬ್ರಾಹ್ಮಣ ಮತ್ತು ನಾಮಧಾರಿ ಮತಗಳು ಜಾಸ್ತಿ ಇರುವುದರಿಂದ ಒಂದು ವೇಳೆ ಕಾಂಗ್ರೆಸ್​​ನಿಂದ ವೆಂಕಟೇಶ್ ಹೆಗಡೆ ಹೊಸಬಾಳೆಗೆ ಟಿಕೆಟ್ ಸಿಕ್ಕಿದ್ದರೆ, ಅವರೂ ಬ್ರಾಹ್ಮಣ ಸಮುದಾಯ ಆಗಿರುವುದರಿಂದ ಬ್ರಾಹ್ಮಣ ಮತಗಳನ್ನು ಸುಲಭವಾಗಿ ಪಡೆಯಬಹುದು ಎಂಬುದು ವೆಂಕಟೇಶ್ ಹೆಗಡೆ ಆಂತರಿಕ ಲೆಕ್ಕಾಚಾರ. ಆದ್ರೆ ಬಿಜೆಪಿಯ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಒಳ್ಳೆಯ ಹಿಡಿತವನ್ನು ಇಟ್ಟುಕೊಂಡಿದ್ದಾರೆ. ಆರು ಬಾರಿ ಸತತವಾಗಿ ಗೆಲುವನ್ನ ಕಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸೋಲಿಸುವುದು ಸುಲಭದ‌‌ ಮಾತಲ್ಲ. ಆದ್ರೆ ಇನ್ನೂವರೆಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿಲ್ಲ.

ಇದನ್ನೂ ಓದಿ: ಬಸವನಬಾಗೇವಾಡಿ: ಶಿವಾನಂದ ಪಾಟೀಲ್ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್​ ಹಾಕುತ್ತಾ ಬಿಜೆಪಿ-ಜೆಡಿಎಸ್​?

ಈ ಬಾರಿಯೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿಬರುತ್ತಿದೆ. ಒಂದು ವೇಳೆ ಭೀಮಣ್ಣ ನಾಯ್ಕ್ ಮತ್ತು ವೆಂಕಟೇಶ್ ಹೆಗಡೆ ಹೊಸಬಾಳೆ ಇಬ್ಬರೂ ಸ್ಪರ್ಧೆ ಮಾಡಿದ್ರೆ ಕಾಂಗ್ರೆಸ್​ನ ವೋಟುಗಳು ಒಡೆದು ಹೊಗುವ ಸಾಧ್ಯತೆಯೇ ಹೆಚ್ಚಿದೆ. ಭೀಮಣ್ಣ ನಾಯ್ಕ್ ಮತ್ತು ವೆಂಕಟೇಶ್ ಹೆಗಡೆ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ರೆ ಸ್ಪೀಕರ್‌ ಕಾಗೇರಿಗೆ ಪ್ರಬಲ ಸ್ಪರ್ಧೆಯನ್ನು ಕೊಡಬಹುದು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ವೆಂಕಟೇಶ್ ಹೆಗಡೆ ಹೊಸಬಾಳೆ ಅವರ ಅಸಮಾಧಾನವನ್ನು ತಣಿಸುವಂತಹ ಕೆಲಸ ಮಾಡುತ್ತಾರಾ ಎನ್ನುವುದು ಕಾದುನೋಡಬೇಕಿದೆ.

ಇದನ್ನೂ ಓದಿ: ಬೆಂಗಳೂರು, ದೆಹಲಿಯಲ್ಲಿ ನನ್ನನ್ನು ಸೋಲಿಸಲು ಪ್ಲಾನ್‌ ಮಾಡಿದ್ದರು: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.