ETV Bharat / assembly-elections

ಕೆಲಸ ಮಾಡದೆ ಸೋಶಿಯಲ್ ಮೀಡಿಯಾ ಸಮರ ನಿಷ್ಪ್ರಯೋಜಕ ಎಂಬುದನ್ನು ಚುನಾವಣೆ ತೋರಿಸಿದೆ: ಗಂಭೀರ್ - Election results

Gautam Gambhir reaction on Election results: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದರೂ ಆಗಿರುವ ಗೌತಮ್​ ಗಂಭೀರ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

Gautam Gambhir
ಗೌತಮ್ ಗಂಭೀರ್
author img

By ETV Bharat Karnataka Team

Published : Dec 4, 2023, 8:05 AM IST

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲುವು ಸಾಧಿಸಿದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ವಿಜಯಿಯಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ, ಬಿಜೆಪಿ ನಾಯಕ ಗೌತಮ್​ ಗಂಭೀರ್ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

''ಕ್ಷೇತ್ರಗಳಲ್ಲಿ ಕೆಲಸ ಮಾಡದೇ ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಸಮರಗಳು ನಿರರ್ಥಕ ಎಂಬುದನ್ನು ಚುನಾವಣಾ ಫಲಿತಾಂಶ ಸಾಬೀತುಪಡಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತಕ್ಕೆ ಸಿಕ್ಕ ಗೆಲುವು'' ಎಂದು ಎಕ್ಸ್ ಖಾತೆಯಲ್ಲಿ ಗಂಭೀರ್ ಬರೆದುಕೊಂಡಿದ್ದಾರೆ.

  • Election results prove that social media wars are useless without on ground performance. This is the victory of Hon’ble PM Shri @narendramodi ji’s governance!

    — Gautam Gambhir (@GautamGambhir) December 3, 2023 " class="align-text-top noRightClick twitterSection" data=" ">

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲುವ ಮೂಲಕ ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಬಿಜೆಪಿ ತನ್ನ ಹಿಡಿತ ಬಿಗಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಮತ್ತಷ್ಟು ಬಲಪಡಿಸಲು ಮತ್ತು 2024ರ ಲೋಕಸಭೆ ಚುನಾವಣೆಗೆ ಮುನ್ನ ವಿಧಾನಸಭಾ ಚುನಾವಣೆ ಫಲಿತಾಂಶಗಳು ಪರಿಣಾಮ ಬೀರಲಿವೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರಗಳು.

ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿನ ಸೋಲು ಕಂಡ ಕಾಂಗ್ರೆಸ್ ತೆಲಂಗಾಣದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮಣಿಸಿ ಅಧಿಕಾರದ ಗದ್ದುಗೆಗೇರಿದೆ. ಲೋಕಸಭೆ ಚುನಾವಣೆಗೆ 'ಸೆಮಿಫೈನಲ್' ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ 3-1 ಅಂತರದಲ್ಲಿ ಗೆಲುವು ಸಾಧಿಸಿ ಭರ್ಜರಿ ಪ್ರದರ್ಶನ ನೀಡಿದೆ.

ಇಂದು ಮಿಜೋರಾಂ ಫಲಿತಾಂಶ: ಇನ್ನು, ಮಿಜೋರಾಂನ ಮತಗಳ ಎಣಿಕೆ ಇಂದು (ಸೋಮವಾರ) ನಡೆಯಲಿದೆ. ಈ ಐದು ರಾಜ್ಯಗಳಲ್ಲಿ ಒಟ್ಟು 84 ಲೋಕಸಭಾ ಸ್ಥಾನಗಳಿದ್ದು, ಮುಂಬರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ನಡೆಯಲಿರುವ ಕೊನೆಯ ಸುತ್ತಿನ ವಿಧಾನಸಭಾ ಚುನಾವಣೆ ಇದಾಗಿದೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 163 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 66 ಸ್ಥಾನಗಳನ್ನು ಗಳಿಸಿದೆ. ರಾಜಸ್ಥಾನದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದು, 199 ಸ್ಥಾನಗಳಲ್ಲಿ 115 ಸ್ಥಾನ ಗೆದ್ದು ಅಧಿಕಾರಕ್ಕೆ ಮರಳಿದೆ. ರಾಜಸ್ಥಾನದಲ್ಲಿ ಐದು ವರ್ಷಕ್ಕೊಮ್ಮೆ ಆಡಳಿತ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಪ್ರವೃತ್ತಿಗೆ ಅಂತ್ಯ ಹಾಡುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ 69 ಸ್ಥಾನಗಳನ್ನಷ್ಟೇ ಪಡೆಯಿತು. ಶ್ರೀಗಂಗಾನಗರದ ಕರಣಪುರ ಕ್ಷೇತ್ರದ ಚುನಾವಣೆಯನ್ನು ಕಾಂಗ್ರೆಸ್ ಅಭ್ಯರ್ಥಿಯ ನಿಧನದಿಂದ ಮುಂದೂಡಲಾಗಿದೆ.

ಚುನಾವಣಾ ಆಯೋಗದಿಂದ ಪಡೆದ ಮಾಹಿತಿಯ ಪ್ರಕಾರ, ಛತ್ತೀಸ್‌ಗಢದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 54 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತದ ಮ್ಯಾಜಿಕ್​ ಸಂಖ್ಯೆ ದಾಟಿದೆ. ಕಾಂಗ್ರೆಸ್ 35 ಸ್ಥಾನಗಳನ್ನು ಗೆದ್ದಿದೆ. ಗೊಂಡ್ವಾನಾ ರಿಪಬ್ಲಿಕ್ ಪಾರ್ಟಿ ಒಂದು ಸ್ಥಾನವನ್ನು ಗೆದ್ದಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದಿದೆ. ಬಿಆರ್‌ಎಸ್ 39, ಬಿಜೆಪಿ 8 ಮತ್ತು ಎಐಎಂಐಎಂ ಏಳು ಸ್ಥಾನಗಳನ್ನು ಪಡೆದರೆ, ಸಿಪಿಐ ಒಂದು ಸ್ಥಾನ ಪಡೆದುಕೊಂಡಿದೆ. ಮುಖ್ಯಮಂತ್ರಿ ಕೆಸಿಆರ್ ಕಾಮರೆಡ್ಡಿ ಕ್ಷೇತ್ರದಲ್ಲಿ ಸೋತರೆ, ಗಜ್ವೆಲ್‌ನಿಂದ ಗೆದ್ದಿದ್ದಾರೆ. ಸೋಲಿನ ಬಳಿಕ ಕೆಸಿಆರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ರಚನೆಗೆ ಕಾಂಗ್ರೆಸ್ ಸಜ್ಜು: ತೆಲಂಗಾಣದ ಎರಡನೇ ಸಿಎಂ ಆಗಿ ನಾಳೆಯೇ ರೇವಂತ್​ ರೆಡ್ಡಿ ಪ್ರಮಾಣವಚನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.