ETV Bharat / assembly-elections

ಶಿಕಾರಿಪುರದಿಂದಲೇ ವಿಜಯೇಂದ್ರ ಕಣಕ್ಕೆ: ಸಿದ್ದರಾಮಯ್ಯ ವಿರುದ್ಧದ ಸ್ಪರ್ಧೆ ವದಂತಿಗೆ ತೆರೆ ಎಳೆದ ಬಿಎಸ್​ವೈ - ವಿಜಯೇಂದ್ರ

ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬ ಗೊಂದಲಕ್ಕೆ ಯಡಿಯೂರಪ್ಪನವರು ಇಂದು ತೆರೆ ಎಳೆದಿದ್ದಾರೆ.

bsy
ಶಿಕಾರಿಪುರದಲ್ಲೇ ವಿಜಯೇಂದ್ರ ಸ್ಪರ್ಧೆ
author img

By

Published : Mar 31, 2023, 5:53 PM IST

ಬೆಂಗಳೂರು: ಮೈಸೂರಿನ ವರುಣಾ ಕ್ಷೇತ್ರದಿಂದ ನನ್ನ ಪುತ್ರ ಸ್ಪರ್ಧೆ ಮಾಡುವುದಿಲ್ಲ, ಈವರೆಗೂ ತಾವು ಪ್ರತಿನಿಧಿಸಿಕೊಂಡು ಬಂದಿರುವ ಶಿಕಾರಿಪುರ ಕ್ಷೇತ್ರದಿಂದಲೇ ತಮ್ಮ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದಿಂದಲೇ ಈ ಬಾರಿಯ ವಿಧಾನಸಭಾ ಚುನಾವಣೆಗೆ ವಿಜಯೇಂದ್ರ ನಿಲ್ಲಬೇಕು ಅಂತ ಬಹಳ ಒತ್ತಡ ಇದೆ. ವರುಣಾದಲ್ಲಿ ಒತ್ತಡ ಇದ್ದರೂ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಬೇಕು ಅಂತ ನಾನು ಈ ಹಿಂದೆಯೇ ಹೇಳಿದ್ದೇನೆ. ಹಾಗಾಗಿ ವರುಣಾದಲ್ಲಿ ವಿಜಯೇಂದ್ರ ಯಾವುದೇ ಕಾರಣಕ್ಕೆ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಶಿಕಾರಿಪುರದಲ್ಲೇ ಚುನಾವಣೆಗೆ ನಿಲ್ಲುವಂತೆ ನಾನು ವಿಜಯೇಂದ್ರಗೆ ಹೇಳಿದ್ದೇನೆ. ವಿಜಯೇಂದ್ರ ವರುಣಾದಲ್ಲಿ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ, ಶಿಕಾರಿಪುರದಲ್ಲೇ ಸ್ಪರ್ಧೆ ಮಾಡುತ್ತಾರೆ. ಹೈಕಮಾಂಡ್ ನಾಯಕರಿಗೂ ವಿಜಯೇಂದ್ರಗೆ ಶಿಕಾರಿಪುರದಿಂದಲೇ ಟಿಕೆಟ್ ನೀಡಿ ಅಂತ ತಿಳಿಸುತ್ತೇನೆ ಎಂದರು.

ಈ ಹಿಂದೆ ವಿಜಯೇಂದ್ರ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಗೊಂದಲ ಕಳೆದ ಹಲವಾರು ದಿನಗಳಿಂದ ಇತ್ತು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದು ಅವರ ವಿರುದ್ಧ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಈ ನಡುವೆ ಇಂದು ವಿಜಯೇಂದ್ರ ಕ್ಷೇತ್ರದ ಬಗ್ಗೆ ಇದ್ದ ಗೊಂದಲಕ್ಕೆ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ವರುಣಾಗೆ ವಿಜಯೇಂದ್ರ ಹೋಗಲ್ಲ, ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಮತದಾನದ ಮೂಲಕ ಅಭ್ಯರ್ಥಿಗಳ ವರ್ಚಸ್ಸನ್ನು ಅಳೆಯಲಾಗುತ್ತಿದೆ. ಮತದಾರರ ಒಲವು ಯಾವ ಅಭ್ಯರ್ಥಿಗೆ ಇದೆ ಎನ್ನುವ ಆಧಾರದಲ್ಲಿ ಟಿಕೆಟ್ ಅಂತಿಮಗೊಳಿಸಲಾಗುತ್ತದೆ. ಇನ್ನು ನಾಲ್ಕೈದು ದಿನದಲ್ಲಿ ಬಿಜೆಪಿ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ತಿಳಿಸಿದರು.

2018ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆ ವೇಳೆಯಲ್ಲಿಯೇ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ವಿಜಯೇಂದ್ರ ಮುಂದಾಗಿದ್ದರು, ಅವರ ಹೆಸರಿಗೆ ಬಹುತೇಕ ಟಿಕೆಟ್ ಫಿಕ್ಸ್ ಆಗಿತ್ತು. ಪ್ರಚಾರ ಕಾರ್ಯಕ್ಕೂ ವಿಜಯೇಂದ್ರ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಅಷ್ಟರಲ್ಲಿ ಹೈಕಮಾಂಡ್ ನಿರ್ಧಾರ ಬದಲಿಸಿ ವಿಜಯೇಂದ್ರಗೆ ಟಿಕೆಟ್ ಘೋಷಣೆ ಮಾಡುವುದಿಲ್ಲ ಎಂದು ಪ್ರಕಟಣೆ ಹೊರಡಿಸಿತ್ತು. ಬಿಎಸ್​ವೈ ಶಾಂತವಾಗಿಸಲು ವಿಜಯೇಂದ್ರನಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡಿ ಕೈ ತೊಳೆದುಕೊಂಡಿತ್ತು.

ಇನ್ನು ಈಗಾಗಲೇ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿರುವ ಯಡಿಯೂರಪ್ಪ, ಶಿಕಾರಿಪುರ ಕ್ಷೇತ್ರದಲ್ಲಿ ವಿಜಯೇಂದ್ರ ನಿಲ್ಲುತ್ತಾರೆ ಎಂದು ಇತ್ತೀಚೆಗೆ ಬಹಿರಂಗ ಹೇಳಿಕೆ ನೀಡಿದ್ದರು. ಆದರೆ ಇದೀಗ ಮತ್ತೊಮ್ಮೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ತಯಾರಿಗೆ ಪೂರಕವಾಗಿ ವಿಜಯೇಂದ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ಯಡಿಯೂರಪ್ಪ ಬಹಿರಂಗವಾಗಿಯೇ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ; ಕಾಂಗ್ರೆಸ್ ಪಕ್ಷ ಇರುವುದು ಗಾಂಧಿ ಕುಟುಂಬದ ಸೇವೆ ಮಾಡಲು: ಅಣ್ಣಾಮಲೈ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.