ETV Bharat / bharat

ಗುಜರಾತ್​ನಲ್ಲಿ ಕಾರು - ಟ್ರಕ್ ಅಪಘಾತ: 6 ಮಂದಿ ಸ್ಥಳದಲ್ಲೇ ದುರ್ಮರಣ - ರಸ್ತೆ ಅಪಘಾತದಲ್ಲಿ 6 ಮಂದಿ ಸಾವು

ಗುಜರಾತ್​ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

accident-site-in-gujarat
ಸ್ಥಳದಲ್ಲೇ ದುರ್ಮರಣ
author img

By

Published : May 21, 2022, 3:15 PM IST

ಅಹಮದಾಬಾದ್​(ಗುಜರಾತ್‌): ಗುಜರಾತ್‌ನ ಅರಾವಳಿ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್​ಗಳ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ 3 ಟ್ರಕ್‌ಗಳು ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದಲ್ಲದೇ, ರಾಸಾಯನಿಕವನ್ನು ಹೊತ್ತೊಯ್ಯತ್ತಿದ್ದ ಟ್ರಕ್​ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಮೂವರು ಟ್ರಕ್​ಗಳು ಹಾನಿಗೀಡಾಗಿವೆ. ಒಂದು ಟ್ರಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ರಾಸಾಯನಿಕ ಇದ್ದ ಕಾರಣ ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟರು.

3 ಗಂಟೆಗಳ ಸತತ ಪ್ರಯತ್ನದ ಬಳಿಕ ಟ್ರಕ್​ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.

ಓದಿ: ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ನಾಲ್ವರು ಬೈಕ್ ಸವಾರರು ಸಾವು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.