ಬೆಂಗಳೂರು: ರಾಜ್ಯದಲ್ಲಿಂದು 1,210 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,99,011ಕ್ಕೆ ಏರಿಕೆ ಆಗಿದೆ. ಕೊರೊನಾಗೆ ಇಂದು 16 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,928ಕ್ಕೆ ಏರಿದೆ.
ಇದನ್ನೂ ಓದಿ: ಎಪಿಎಂಸಿ ಕಾಯಿದೆಯಿಂದ ರೈತರಿಗೆ ಅನುಕೂಲ, ವದಂತಿಗಳಿಗೆ ಕಿವಿಗೊಡಬೇಡಿ: ಸಚಿವ ಸೋಮಶೇಖರ್
19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ 1.19ರಷ್ಟು ಹಾಗೂ ಸಾವಿನ ಪ್ರಮಾಣ ಶೇ. 1.32ರಷ್ಟು ಇದೆ. ಕೋವಿಡ್ನಿಂದ ಇಂದು 1,807 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 8,68,471ಕ್ಕೆ ತಲುಪಿದೆ.
253 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಇದ್ದು, ರಾಜ್ಯದಲ್ಲಿ ಸದ್ಯ 18,593 ಸಕ್ರಿಯ ಪ್ರಕರಣಗಳು ಇವೆ. ಕಳೆದ 7 ದಿನಗಳಲ್ಲಿ 26,080 ಜನರು ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 89,844 ಹಾಗೂ ದ್ವಿತೀಯ ಸಂಪರ್ಕದಲ್ಲಿ 1,00,948 ಜನರು ಇದ್ದಾರೆ.
ಬೆಂಗಳೂರು ನಗರದ ಕೋವಿಡ್ ಸೋಂಕಿತರ ಪ್ರಮಾಣದಲ್ಲಿ ಕೊಂಚ ಇಳಿಕೆ - 659 ಪಾಸಿಟಿವ್, 6 ಮಂದಿ ಬಲಿ
ನಗರದಲ್ಲಿಂದ ಸೋಂಕಿತರ ಪ್ರಮಾಣದಲ್ಲಿ ಕೊಂಚ ತಗ್ಗಿದೆ. 700 ಮೇಲ್ಪಟ್ಟು ಬರುತ್ತಿದ್ದ ಪ್ರಮಾಣ ಇಂದು 659 ಜನರಲ್ಲಿ ಕೋವಿಡ್ ದೃಢಪಟ್ಟಿದೆ. ಮೃತರ ಸಂಖ್ಯೆಯಲ್ಲೂ ಇಳಿಮುಖವಾಗಿದ್ದು, 6 ಜನ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ ಒಟ್ಟು 3,77,251 ಕ್ಕೆ ಏರಿಕೆಯಾಗಿದೆ. ಇಂದು 1248 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 3,59,801 ಮಂದಿ ಬಿಡುಗಡೆ ಹೊಂದಿದ್ದಾರೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 13,225 ಕ್ಕೆ ಇಳಿಕೆಯಾಗಿದೆ. ಇಂದು 6 ಮಂದಿ ಮೃತಪಟ್ಟಿದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,224 ಕ್ಕೆ ಏರಿಕೆಯಾಗಿದೆ. ತೀವ್ರ ನಿಗಾ ಘಟಕದಲ್ಲಿ 113 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.