ETV Bharat / bharat

ಗ್ರೆನೇಡ್​ ಸ್ಫೋಟ ಶಂಕೆ: ಬಾಲಕಿ ಸಾವು.. ಆರು ಜನರ ಸ್ಥಿತಿ ಗಂಭೀರ - ಕುಪ್ವಾರ ಜಿಲ್ಲೆಯಲ್ಲಿ ಗ್ರೆನೇಡ್ ಬ್ಲಾಸ್ಟ್

ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 17 ವರ್ಷದ ಬಾಲಕಿ ಮೃತಪಟ್ಟಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ

ಗ್ರೆನೇಡ್​ ಸ್ಫೋಟ
ಗ್ರೆನೇಡ್​ ಸ್ಫೋಟ
author img

By

Published : Sep 17, 2021, 9:54 AM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ 17 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಜತೆಗೆ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಘಟನೆಗೆ ನಿಖರವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಜಿಲ್ಲೆಯ ಹಂದ್ವಾರ ಪ್ರದೇಶದ ತಾರತ್ಪೋರಾದಲ್ಲಿರುವ ಗುಲಾಂ ಅಹ್ಮದ್ ವಾನಿ ಅವರ ಮನೆಯಲ್ಲಿ ರಾತ್ರಿ 8.45 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಶಬ್ನಮ್ ವಾನಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿ, ಗ್ರೆನೇಡ್​ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಲೆಗೆ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ: ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಶಂಕೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.