ನಾಗ್ಪುರ (ಮಹಾರಾಷ್ಟ್ರ): ಇಲ್ಲಿನ ಭಂಡಾರ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಎಸ್‌ಎನ್‌ಐಸಿ) ಸಂಭವಿಸಿದ ಬೆಂಕಿ ಅವಘಡದಲ್ಲಿ ಹತ್ತು ನವಜಾತ ಶಿಶುಗಳು ಮೃತಪಟ್ಟಿವೆ.
ಮುಂಜಾನೆ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 17 ಮಕ್ಕಳಲ್ಲಿ 7 ಮಕ್ಕಳನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿ ಆಸ್ಪತ್ರೆಯಲ್ಲಿದ್ದವರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿತು.
ಎಸ್‌ಎನ್‌ಐಸಿ ಎರಡು ಘಟಕಗಳನ್ನು ಹೊಂದಿದೆ. ಔಟ್ ಬಾರ್ನ್ ಮತ್ತು ಇನ್ ಬಾರ್ನ್. ಇವುಗಳಲ್ಲಿ, ಇನ್ ಬಾರ್ನ್‌ನಿಂದ ಏಳು ಮಕ್ಕಳನ್ನು ರಕ್ಷಿಸಲಾಗಿದೆ ಮತ್ತು ಔಟ್ ಬಾರ್ನ್ ಘಟಕದಲ್ಲಿದ್ದ 10 ಮಕ್ಕಳು ಸಾವನ್ನಪ್ಪಿವೆ.
ಶಿಶುಗಳ ಸಾವಿನ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದು, ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
-
Heart-wrenching tragedy in Bhandara, Maharashtra, where we have lost precious young lives. My thoughts are with all the bereaved families. I hope the injured recover as early as possible.
— Narendra Modi (@narendramodi) January 9, 2021 " class="align-text-top noRightClick twitterSection" data="
">Heart-wrenching tragedy in Bhandara, Maharashtra, where we have lost precious young lives. My thoughts are with all the bereaved families. I hope the injured recover as early as possible.
— Narendra Modi (@narendramodi) January 9, 2021Heart-wrenching tragedy in Bhandara, Maharashtra, where we have lost precious young lives. My thoughts are with all the bereaved families. I hope the injured recover as early as possible.
— Narendra Modi (@narendramodi) January 9, 2021
ಈ ಅವಘಡದಲ್ಲಿ ಶಿಶುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಘೋಷಿಸಿದ್ದಾರೆ.
ಘಟನೆಯ ತುರ್ತು ಆಧಾರದ ಮೇಲೆ ಎಲ್ಲಾ ಆಸ್ಪತ್ರೆಗಳ ಲೆಕ್ಕಪರಿಶೋಧನೆಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಅಜಿತ್ ಪವಾರ್ ಆದೇಶಿಸಿದ್ದಾರೆ.