ಬಲೋದ್ (ಛತ್ತೀಸ್ಗಢ): ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 11 ಜನರು ದಾರುಣವಾಗಿ ಸಾವನ್ನಪ್ಪಿದ ಘಟನೆ ಧಮ್ತಾರಿ ಜಿಲ್ಲೆಯ ಜಾಗತ್ರ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ. ಮೃತರಲ್ಲಿ ಐವರು ಮಹಿಳೆಯರು ಹಾಗು ಇಬ್ಬರು ಮಕ್ಕಳು ಸೇರಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡರು.
ವಿವರ: ಬುಧವಾರ ರಾತ್ರಿ(ನಿನ್ನೆ) ರುದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊರೆಮ್ ಗ್ರಾಮದ ಸಾಹು ಕುಟುಂಬ ಕಂಕೇರ್‌ನಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮಕ್ಕೆ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದರು. ಬಲೋದ್‌ನ ಜಾಗತ್ರ ಎಂಬಲ್ಲಿ ಸಂಚರಿಸುತ್ತಿದ್ದಾಗ ಎದುರಾದ ಟ್ರಕ್, ಬೊಲೆರೊಗೆ ಡಿಕ್ಕಿ ಹೊಡೆಯಿತು. ರಭಸಕ್ಕೆ ಬೊಲೆರೊ ಕೆಲವು ಮೀಟರ್ಗಳಷ್ಟು ದೂರ ಹಾರಿ ಬಿದ್ದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ 11 ಜನರ ಪೈಕಿ 10 ಮಂದಿ ಸ್ಥಳದಲ್ಲೇ ಮೃತಪಟ್ಟರು. ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಮೃತರೆಲ್ಲರೂ ಧಮ್ತಾರಿ ಜಿಲ್ಲೆಯ ಸೋರಂ ಭಟಗಾಂವ್ ನಿವಾಸಿಗಳು ಎಂದು ಹೇಳಲಾಗುತ್ತಿದೆ.
ಅಪಘಾತದ ನಂತರ ಸ್ಥಳೀಯರು ಮತ್ತು ರಸ್ತೆಯಲ್ಲಿ ತೆರಳುತ್ತಿದ್ದ ವಾಹನ ಸವಾರರು ಪೊಲೀಸರಿಗೆ ಮಾಹಿತಿ ನೀಡಿದರು. ಸುದ್ದಿ ತಿಳಿದ ತಕ್ಷಣ ಪೊಲೀಸರ ತಂಡ ಸ್ಥಳಕ್ಕೆ ದೌಡಾಯಿಸಿತ್ತು. ಪರಿಶೀಲನೆ ಕೈಗೊಂಡ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಜಧಾನಿ ರಾಯಪುರಕ್ಕೆ ರವಾನಿಸಲಾಯಿತಾದರೂ ಆಕೆ ಬದುಕುಳಿಯಲಿಲ್ಲ.
-
अभी अभी सूचना मिली है कि बालोद के पुरूर और चारमा के बीच बालोदगहन के पास शादी कार्यक्रम में जा रही बोलेरो और ट्रक के बीच भिड़ंत में 10 लोगों की मृत्यु हो गई है एवं एक बच्ची की स्थिति गंभीर है।
— Bhupesh Baghel (@bhupeshbaghel) May 3, 2023 " class="align-text-top noRightClick twitterSection" data="
ईश्वर दुर्घटना में दिवंगत आत्माओं को शांति एवं उनके परिवारजनों को हिम्मत दे। घायल बच्ची…
">अभी अभी सूचना मिली है कि बालोद के पुरूर और चारमा के बीच बालोदगहन के पास शादी कार्यक्रम में जा रही बोलेरो और ट्रक के बीच भिड़ंत में 10 लोगों की मृत्यु हो गई है एवं एक बच्ची की स्थिति गंभीर है।
— Bhupesh Baghel (@bhupeshbaghel) May 3, 2023
ईश्वर दुर्घटना में दिवंगत आत्माओं को शांति एवं उनके परिवारजनों को हिम्मत दे। घायल बच्ची…अभी अभी सूचना मिली है कि बालोद के पुरूर और चारमा के बीच बालोदगहन के पास शादी कार्यक्रम में जा रही बोलेरो और ट्रक के बीच भिड़ंत में 10 लोगों की मृत्यु हो गई है एवं एक बच्ची की स्थिति गंभीर है।
— Bhupesh Baghel (@bhupeshbaghel) May 3, 2023
ईश्वर दुर्घटना में दिवंगत आत्माओं को शांति एवं उनके परिवारजनों को हिम्मत दे। घायल बच्ची…
ಸಿಎಂ ಸಂತಾಪ: ಘಟನೆಯ ಮಾಹಿತಿ ತಿಳಿದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಾಳು ಬಾಲಕಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಎಂ ತಡರಾತ್ರಿ ಟ್ವೀಟ್ ಮಾಡಿ, ಬಲೋದ್‌ನ ಪುರೂರ್ ಮತ್ತು ಚಾರ್ಮಾ ನಡುವಿನ ಬಲೋದ್‌ಗಹನ್ ಬಳಿ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಬೊಲೆರೊ ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಆತ್ಮಕ್ಕೆ ಭಗವಂತ ಶಾಂತಿ ದೊರೆಯಲಿ. ಅವರ ಕುಟುಂಬಕ್ಕೆ ಧೈರ್ಯ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಟ್ರಕ್ ಚಾಲಕ ಪರಾರಿ: ಇನ್ನು, ಅಪಘಾತ ಸಂಭವಿಸಿದ ಬಳಿಕ ಟ್ರಕ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಶೀಘ್ರವೇ ಆತನನ್ನು ಸೆರೆ ಹಿಡಿಯಲಾಗುವುದು ಎಂದು ಬಲೋದ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ಮಾಹಿತಿ ನೀಡಿದರು. ಬಲೋದ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ತಂದೆಯ ಶವವನ್ನು ಬೆಡ್ಶೀಟ್ನಲ್ಲಿ ಸುತ್ತಿ ರಸ್ತೆ ಬದಿ ಎಸೆದು ಹೋದ ಮಗ