ನವದೆಹಲಿ: 100 ವರ್ಷದ ಸ್ವಾತಂತ್ರ್ಯ ಹೋರಾಟಗಾರ ಲಜಪತ್ ರಾಯ್ ಯಾದವ್ ಇಂದು ದೆಹಲಿಯ ಕಂಟೋನ್ಮೆಂಟ್ ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಈ ವೇಳೆ ಕೋವಿಡ್ ವ್ಯಾಕ್ಸಿನ್ ಆದಷ್ಟು ಬೇಗ ತೆಗೆದುಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಕ್ವಿಂಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಎರಡು ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಲಜಪತ್ ರಾಯ್ ಯಾದವ್, 1939ರಲ್ಲಿ ಹೈದರಾಬಾದ್‌ನಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು.
ಲಜಪತ್ ರಾಯ್ ಯಾದವ್ ದೆಹಲಿ ಕಂಟೋನ್ಮೆಂಟ್‌ನಲ್ಲಿ ವಾಸಿಸುತ್ತಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಹಳೆಯ ಮನೋಭಾವ ನೆನಪಿಸಿಕೊಳ್ಳಲು ಮತ್ತು ದೇಶದಲ್ಲಿ ನಡೆಯುತ್ತಿರುವ ಕೊರೊನಾ ವೈರಸ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಜನರನ್ನು ಪ್ರೋತ್ಸಾಹಿಸಿದ್ದಾರೆ.
ಮಾಜಿ ಸ್ವಾತಂತ್ರ್ಯ ಹೋರಾಟಗಾರ ಮತ್ತು 100 ವರ್ಷದ ಲಜಪತ್ ರಾಯ್ ಲಸಿಕೆ ಪಡೆದುಕೊಳ್ಳಲು ಇತರ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿರುವುದು ಶ್ಲಾಘನೀಯ ಎಂದು ದೆಹಲಿ ಕಂಟೋನ್ಮೆಂಟ್ ಮಾಜಿ ಕೌನ್ಸಿಲರ್ ರಚ್ನಾ ಕಡಿಯನ್ ಮಾಹಿತಿ ನೀಡಿದ್ದಾರೆ.