ETV Bharat / bharat

INDIA Vs NDA: ಸಂಸತ್ತಿನಲ್ಲಿ 91 ಸದಸ್ಯರಿದ್ದರೂ 11 ರಾಜಕೀಯ ಪಕ್ಷಗಳು ತಟಸ್ಥ.. ಯಾರಿಗೆ ಲಾಭ, ಯಾರಿಗೆ ನಷ್ಟ? - AIMIM

ಕೇಂದ್ರದ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್​ ತಮ್ಮ ಮಿತ್ರಪಕ್ಷಗಳೊಂದಿಗೆ ಮಂಗಳವಾರ ತಮ್ಮ ಬಲ ಪ್ರದರ್ಶನ ಮಾಡಿವೆ. ಇದರ ನಡುವೆ ಯಾವುದೇ ಬಣಕ್ಕೆ ಸೇರದ 11 ಪಕ್ಷಗಳು ತಟಸ್ಥವಾಗಿ ಉಳಿಯುವ ಮೂಲಕ ಕುತೂಹಲ ಕೆರಳಿಸಿವೆ.

11 political parties with 91 MPs remain on fence as BJP, Congress sew up alliances
INDIA Vs NDA: ಸಂಸತ್ತಿನಲ್ಲಿ 91 ಸದಸ್ಯರಿದ್ದರೂ 11 ರಾಜಕೀಯ ಪಕ್ಷಗಳು ತಟಸ್ಥ
author img

By

Published : Jul 19, 2023, 10:16 PM IST

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಾಲೀಮು ಆರಂಭಿಸಿವೆ. ಈಗಾಗಲೇ 65 ಪಕ್ಷಗಳು ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದ ಒಕ್ಕೂಟವನ್ನು ಸೇರುವ ಮೂಲಕ ಚುನಾವಣಾ ಅಖಾಡಕ್ಕೆ ಸಜ್ಜುಗೊಳ್ಳುತ್ತಿವೆ. ಆದರೆ, ಸಂಸತ್ತಿನಲ್ಲಿ ಒಟ್ಟು 91 ಸದಸ್ಯರನ್ನು ಹೊಂದಿರುವ ಕನಿಷ್ಠ 11 ಪಕ್ಷಗಳು ತಟಸ್ಥ ಸ್ಥಿತಿಗೆ ಜಾರಿವೆ. ಇದರಲ್ಲಿ ಮೂರು ಪಕ್ಷಗಳು ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಒಡಿಶಾದಂತಹ ಮೂರು ದೊಡ್ಡ ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಒಟ್ಟಾಗಿ 63 ಸದಸ್ಯರನ್ನು ಲೋಕಸಭೆಗೆ ಕಳುಹಿಸುತ್ತವೆ.

2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಎದುರಿಸಲು ಕಾಂಗ್ರೆಸ್​ ನೇತೃತ್ವದ ಪ್ರತಿಪಕ್ಷಗಳು ಒಗ್ಗೂಡುವ ಪ್ರಯತ್ನದಲ್ಲಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ 39 ಪಕ್ಷಗಳು ಇವೆ. ಇದರ ಪ್ರತಿಸ್ಪರ್ಧಿಯಾಗಿರುವ ಕಾಂಗ್ರೆಸ್ ನೇತೃತ್ವದ ಹೊಸ ಮೈತ್ರಿಕೂಟದಲ್ಲಿ 25 ಪಕ್ಷಗಳು ಇವೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್​ ಹಾಗೂ ಪ್ರತಿಪಕ್ಷಗಳು ಮೈತ್ರಿಕೂಟ ಇಂಡಿಯಾ (Indian National Developmental Inclusive Alliance - INDIA) ಎಂಬ ಹೆಸರಲ್ಲಿ ರೂಪಗೊಂಡಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ನರೇಂದ್ರ ಮೋದಿ ನೇತೃತ್ವ, ಮೈತ್ರಿ ಸರ್ಕಾರ ರಚನೆ: ಎನ್​ಡಿಎ ನಿರ್ಣಯ

ತಟಸ್ಥವಾಗಿರುವ ಪಕ್ಷಗಳು: ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್ಆರ್​ಸಿಪಿ), ಬಿಜು ಜನತಾ ದಳ (ಬಿಜೆಡಿ), ಭಾರತ್ ರಾಷ್ಟ್ರ ಸಮಿತಿ (ಬಿಆರ್​ಎಸ್), ಬಹುಜನ ಸಮಾಜ ಪಕ್ಷ (ಬಿಎಸ್​ಪಿ), ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ), ತೆಲುಗು ದೇಶಂ ಪಕ್ಷ (ಟಿಡಿಪಿ), ಶಿರೋಮಣಿ ಅಕಾಲಿದಳ (ಎಸ್‌ಎಡಿ), ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್), ಜನತಾ ದಳ (ಜಾತ್ಯತೀತ) - ಜೆಡಿಎಸ್​, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ) ಮತ್ತು ಎಸ್‌ಎಡಿ (ಮನ್) ಪಕ್ಷಗಳು ಯಾವ ಮೈತ್ರಿಕೂಟವನ್ನೂ ಸೇರದೆ ತಟಸ್ಥವಾಗಿ ಉಳಿದಿವೆ.

2019ರಲ್ಲಿ ಆಂಧ್ರಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಮತ್ತು 2000ರಿಂದ ಒಡಿಶಾದಲ್ಲಿ ಆಡಳಿತ ನಡೆಸುತ್ತಿರುವ ಬಿಜು ಜನತಾ ದಳ (ಬಿಜೆಡಿ) ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಪರವಾಗಿ ಹೆಚ್ಚಾಗಿ ಮತ ಚಲಾಯಿಸಿವೆ. 2014ರಲ್ಲಿ ಆಂಧ್ರಪ್ರದೇಶದಿಂದ ವಿಭಜನೆಗೊಂಡ ನಂತರದಿಂದ ತೆಲಂಗಾಣದಲ್ಲಿ ಆಡಳಿತ ನಡೆಸುತ್ತಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಈ ವರ್ಷದ ಆರಂಭದಲ್ಲೇ ಪ್ರತಿಪಕ್ಷಗಳು ಮೈತ್ರಿಕೂಟ ಸ್ಥಾಪಿಸುವ ನಿಟ್ಟಿನಲ್ಲಿ ಸಾಕಷ್ಟು ಕಸರತ್ತು ನಡೆಸಿತ್ತು. ಆದರೆ, ಇದೀಗ ಹೊಸದಾಗಿ ರಚನೆಯಾದ ಪ್ರತಿಪಕ್ಷಗಳ ಒಕ್ಕೂಟದಿಂದ ಇದು ದೂರವೇ ಉಳಿದಿದೆ. ಚುನಾವಣೆಯವರೆಗೂ ಇದೇ ನಿಲುವನ್ನು ಈ ಪಕ್ಷಗಳು ಅನುಸರಿಸುತ್ತವೇ ಮತ್ತು ಮುಂದೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಉಭಯ ಬಣದಲ್ಲಿಲ್ಲದ ಬಿಎಸ್​ಪಿ ಸ್ವತಂತ್ರ ಸ್ಪರ್ಧೆ; ಜೆಡಿಎಸ್​ ಯಾರ ಕಡೆ?

ಲೋಕಸಭೆಯಲ್ಲಿ ಒಂಬತ್ತು ಸದಸ್ಯರನ್ನು ಹೊಂದಿರುವ ಮಾಯಾವತಿ ನೇತೃತ್ವದ ಬಿಎಸ್‌ಪಿ ಕೂಡ ಪ್ರತಿಪಕ್ಷಪಕ್ಷದ ಮೈತ್ರಿಯಿಂದ ಹೊರಗುಳಿದಿದೆ. ಉತ್ತರ ಪ್ರದೇಶದಲ್ಲಿ ನಾಲ್ಕು ಬಾರಿ ಆಡಳಿತ ನಡೆಸಿದ ಬಿಎಸ್‌ಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಮತ್ತು ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕೇಂದ್ರದ ಯೋಜನೆಗಳಲ್ಲಿ ರಾಜ್ಯಕ್ಕೆ ಸಾಕಷ್ಟು ನೆರವು ಸಿಗುತ್ತಿಲ್ಲ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ, ಗುರುವಾರದಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಈ ವಿಷಯವನ್ನು ಧ್ವನಿ ಎತ್ತುವಂತೆ ಪಕ್ಷದ ಸಂಸದರಿಗೆ ಸೂಚಿಸಿದ್ದಾರೆ.

ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಕೂಡ ಪ್ರತಿಪಕ್ಷಗಳ ಮೈತ್ರಿಯಿಂದ ಹೊರಗುಳಿದಿದೆ. ತಮ್ಮ ಪಕ್ಷವನ್ನು ರಾಜಕೀಯ ಅಸ್ಪೃಶ್ಯರು ಎಂದು ಪರಿಗಣಿಸಲಾಗುತ್ತಿದೆ ಎಂದು ಎಐಎಂಐಎಂ ಕಿಡಿಕಾರಿದೆ. ಈ ಪಕ್ಷವು ಹೈದರಾಬಾದ್ ಮತ್ತು ತೆಲಂಗಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಣನೀಯ ಅಸ್ತಿತ್ವ ಹೊಂದಿದೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ ಮತ್ತು ಕರ್ನಾಟಕದಂತಹ ರಾಜ್ಯಗಳಲ್ಲಿ ಪಕ್ಷವನ್ನು ವಿಸ್ತರಿಸಲು ಅದು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಮೋದಿ v/s ಇಂಡಿಯಾ ಕದನ ಎಂದ ರಾಹುಲ್​: ಭಾರತ ಗೆಲ್ಲುತ್ತೆ ಬಿಜೆಪಿ ಸೋಲುತ್ತೆ ಎಂದು ಭವಿಷ್ಯ ನುಡಿದ ಮಮತಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.