ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,466 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿದ್ದು, 460 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸದ್ಯಕ್ಕೆ ಭಾರತದಲ್ಲಿ 1,39,683 ಸಕ್ರಿಯ ಪ್ರಕರಣಗಳಿದ್ದು, ಕಳೆದ 264 ದಿನಗಳಿಗೆ ಹೋಲಿಸಿದ್ರೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ನಿನ್ನೆ 11,961 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಚೇತರಿಕೆ ಪ್ರಮಾಣ 98.25% ಇದೆ.
ಮಹಾಮಾರಿ ಸೋಂಕಿಗೆ ನಿನ್ನೆ ಬರೋಬ್ಬರಿ 460 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ4,61,849 ಕ್ಕೆ ಏರಿಕೆಯಾಗಿದೆ. ಜೊತೆಗೆ ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನ ನಿರಂತರವಾಗಿ ನಡೆಯುತ್ತಿದ್ದು ನಿನ್ನೆ 52,69, 137 ಡೋಸ್ ಲಸಿಕೆ ನೀಡಲಾಗಿದೆ. ಈವರೆಗೆ ಒಟ್ಟು 109,63,59,208 ಕೋಟಿ ಕೋವಿಡ್ ಲಸಿಕಾ ಡೋಸ್ ನೀಡಲಾಗಿದೆ.
ಇನ್ನು ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 6,409 ಹೊಸ ಕೋವಿಡ್ -19 ಪ್ರಕರಣಗಳು ದೃಢಪಟ್ಟಿದ್ದು, 47 ಮಂದಿ ಸಾವನ್ನಪ್ಪಿದ್ದಾರೆ.