ETV Bharat / bharat

ವಾರಾಣಸಿಯಲ್ಲಿ ಬಿಜೆಪಿಯಿಂದ ಮೆಗಾ ಕಾರ್ಯಕ್ರಮ.. ಡಿ.13ರ ನಮೋ ವಾರಾಣಸಿ ಪ್ರವಾಸಕ್ಕೆ 12 ಸಿಎಂಗಳು ಸಾಥ್​​

ಉತ್ತರ ಪ್ರದೇಶದಲ್ಲಿ ಮತ್ತೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿರುವ ಬಿಜೆಪಿ ಇದೀಗ ಅತಿದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಲು ಮುಂದಾಗಿದೆ.

Kashi Vishwanath Corridor inaugurate
Kashi Vishwanath Corridor inaugurate
author img

By

Published : Dec 6, 2021, 9:51 PM IST

ನವದೆಹಲಿ: ಗಂಗಾ ಹಾಗೂ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್​​​​ ಅನ್ನು ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್​​​​ 13ರಂದು ಉದ್ಘಾಟನೆ ಮಾಡಲಿದ್ದಾರೆ. ಅದಕ್ಕಾಗಿ ಎರಡು ದಿನಗಳ ಕಾಲ ನಮೋ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಉಳಿದುಕೊಳ್ಳಲಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಈ ಪ್ರವಾಸ ಮಹತ್ವ ಪಡೆದುಕೊಂಡಿದ್ದು, ಇದೇ ಕಾರಣಕ್ಕಾಗಿ 'ದಿವ್ಯ ಕಾಶಿ ಭವ್ಯ ಕಾಶಿ' ಕಾರ್ಯಕ್ರಮ ಆಯೋಜನೆ ಮಾಡಲು ಯುಪಿ ಸರ್ಕಾರ ಮುಂದಾಗಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೆಗಾ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ. ಇದೇ ಕಾರಣಕ್ಕಾಗಿ ದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವ 12 ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

Kashi Vishwanath Corridor inaugurate
ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ

ಡಿಸೆಂಬರ್​​ 14ರಂದು ನಡೆಯಲಿರುವ 'ಉತ್ತಮ ಆಡಳಿತ' ವಿಷಯದ ವಿಚಾರ ಸಂಕಿರಣದಲ್ಲಿ ಎಲ್ಲ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಈ ವೇಳೆ, ಕೋವಿಡ್​ ನಿರ್ವಹಣೆ ಹಾಗೂ ವ್ಯಾಕ್ಸಿನೇಷನ್​ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಲಹೆ - ಸೂಚನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಆರಂಭದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ನೀತಿ ಸಂಹಿತೆ ಜಾರಿಗೊಳ್ಳಲಿದೆ. ಅದಕ್ಕೂ ಮುಂಚಿತವಾಗಿ ಬಿಜೆಪಿ ಈ ಮೆಗಾ ಕಾರ್ಯಕ್ರಮ ಆಯೋಜನೆ ಮಾಡಲು ಮುಂದಾಗಿದೆ.

ಇದನ್ನೂ ಓದಿರಿ: Omicronನಿಂದ ಭಾರತಕ್ಕೆ ಕೋವಿಡ್​ 3ನೇ ಅಲೆ ಭೀತಿ: IMA ಅಧ್ಯಕ್ಷರು ಹೇಳಿದ್ದೇನು ನೋಡಿ!

ಈಗಾಗಲೇ ಅನೇಕ ಸಲ ಉತ್ತರ ಪ್ರದೇಶ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅನೇಕ ಅಭಿವೃದ್ಧಿ ಪರ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ನಾಳೆ ಗೋರಖ್​ಪುರ್​ ಪ್ರವಾಸ ಕೈಗೊಳ್ಳಲಿರುವ ನಮೋ ಮೂರು ಮಹತ್ವದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.​

ಕಾಶಿ ವಿಶ್ವನಾಥ ಕಾರಿಡಾರ್​​​ ನಿರ್ಮಾಣಕ್ಕಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದ್ದು, ಸುಮಾರು 24 ಕಟ್ಟಡಗಳು ನಿರ್ಮಾಣಗೊಂಡಿವೆ. ಪ್ರಮುಖವಾಗಿ ಕಟ್ಟಡದ ಗೋಡೆಗಳ ಮೇಲೆ ಶ್ಲೋಕ, ಸ್ತೋತ್ರ ಕೆತ್ತಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.