ETV Bharat / bharat

ಹೈಕಮಾಂಡ್​ಗೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ಎಐಸಿಸಿ ಸದಸ್ಯ

author img

By

Published : Jan 19, 2022, 8:44 AM IST

ಎಐಸಿಸಿ ಸದಸ್ಯ ವಿಶ್ವಬಂಧು ರೈ ಅವರು ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ಎಂವಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಕೂಡಾ ಒಂದು ಭಾಗವಾಗಿದ್ದು, 12 ಮಂದಿ ಪಕ್ಷಕ್ಕೆ ಸೇರಿದ ಸಚಿವರಿದ್ದಾರೆ. ಆದರೂ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಪ್ರಣಾಳಿಕೆ ಅಂಶಗಳನ್ನು ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನಗಳನ್ನು ಹೊರಹಾಕಿದ್ದಾರೆ.

ವಿಶ್ವಬಂಧು ರೈ
ವಿಶ್ವಬಂಧು ರೈ

ಮುಂಬೈ (ಮಹಾರಾಷ್ಟ್ರ): ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಹಠದಲ್ಲಿ ಪಕ್ಷಗಳು ನಾನಾ ಕಸರತ್ತುಗಳನ್ನು ನಡೆಸುತ್ತಿವೆ. ಆದರೆ, ಚುನಾವಣೆ ನಡೆಯದಿರುವ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನಾಯಕನೊಬ್ಬ ಹೈಕಮಾಂಡ್​ಗೆ ಪತ್ರ ಬರೆದು, ಕೆಲವೊಂದು ಅಸಮಾಧಾನಗಳನ್ನು ಹೊರಹಾಕಿದ್ದಾನೆ.

ಎಐಸಿಸಿ ಸದಸ್ಯ ವಿಶ್ವಬಂಧು ರೈ ಅವರು ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಮಹಾರಾಷ್ಟ್ರದಲ್ಲಿ ಸರ್ಕಾರ ನಡೆಸುತ್ತಿರುವ ಎಂವಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಕೂಡಾ ಒಂದು ಭಾಗವಾಗಿದೆ. ಮಹಾರಾಷ್ಟ್ರದಲ್ಲಿ 12 ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಚಿವರಿದ್ದಾರೆ. ಆದರೂ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಪ್ರಣಾಳಿಕೆ ಅಂಶಗಳನ್ನು ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉಲ್ಲೇಖಿಸಿದ್ದಾರೆ.

2019ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಂಬೈ ನಿವಾಸಿಗಳಿಗೆ ಎಸ್‌ಆರ್‌ಎ ಯೋಜನೆಯಡಿ 500 ಚದರ ಅಡಿ ಮನೆಗಳನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು. ಈ ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ಸಚಿವರು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.

ಆದರೆ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಂಬೈನಲ್ಲಿ 500 ಚದರ ಅಡಿವರೆಗಿನ ಮನೆಗಳ ಮೇಲಿನ ತೆರಿಗೆ ಮನ್ನಾ ಮಾಡಿ, ಎಲ್ಲ ಕ್ರೆಡಿಟ್ ಅನ್ನು ಅವರೇ ತೆಗೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ವಿಶ್ವಬಂಧು ರೈ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

ಓದಿ: ಚುನಾವಣೆ ಗೆಲ್ಲಲು ಬಿಜೆಪಿ ಹೊಸ ಪ್ಲಾನ್​: ಹೈಬ್ರೀಡ್​ ಸಭೆಗಳ ಮೂಲಕ ಪ್ರಚಾರಕ್ಕೆ ವೇದಿಕೆ ಸಜ್ಜು

ಎಂವಿಎ ಸರ್ಕಾರದಲ್ಲಿ ಎನ್​ಸಿಪಿ ಕೂಡಾ ಪಾಲುದಾರನಾಗಿದ್ದು, ಕಾಂಗ್ರೆಸ್ ಕೌನ್ಸಿಲರ್​ಗಳನ್ನು ತಮ್ಮ ಬಳಿಗೆ ಸೆಳೆದುಕೊಳ್ಳುತ್ತಿದೆ. ಕಾಂಗ್ರೆಸ್​ನ ಕೆಲವು ನಾಯಕರು, ಶಿವಸೇನಾ ಮತ್ತು ಎನ್​ಸಿಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವಿಶ್ವಬಂಧು ರೈ ಆರೋಪಿಸಿದ್ದಾರೆ.

ರಾಜ್ಯದಲ್ಲಿ ರಾಹುಲ್ ಗಾಂಧಿ ಅವರ ಸಮಾರಂಭಗಳಿಗೆ ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ರೈ ಹೇಳಿದ್ದು, ಮುಂಬೈ ಕಾಂಗ್ರೆಸ್ ಘಟಕದ ಅಧ್ಯಕ್ಷರು ಮುಂಬರುವ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಕಾಂಗ್ರೆಸ್ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿಲ್ಲ ಎಂದು ವಿಶ್ವಬಂಧು ರೈ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ವಿದ್ಯುತ್ ಬಿಲ್ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದೆ. ಇಂಧನ ಖಾತೆ ಕಾಂಗ್ರೆಸ್​ ಪಕ್ಷದ ಸಚಿವರಿಗೆ ಸೇರಿದ್ದರೂ, ಇನ್ನು ವಿದ್ಯುತ್ ಬಿಲ್ ಮನ್ನಾ ಮಾಡಲು ಸಾಧ್ಯವಾಗಲಿಲ್ಲ ಎಂದು ವಿಶ್ವ ಬಂಧು ರೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಓದಿ: ಯುಪಿ ವಿಧಾನಸಭೆ ಚುನಾವಣೆ: ಮುಲಾಯಂ ಸೊಸೆ ಬಿಜೆಪಿ ಸೇರ್ಪಡೆ ಸಾಧ್ಯತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.