ನವದೆಹಲಿ: ದೇಶದಲ್ಲಿ ವರದಿಯಾದ ಮೂರು ರಸ್ತೆ ಅಪಘಾತ ಪ್ರಕರಣಗಳಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಇತರೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ-1: ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ನಡೆದ ಕ್ರೂಸರ್ ಮತ್ತು ಟ್ರಕ್ ಮಧ್ಯೆ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಐದು ಮಂದಿ ಮೃತಪಟ್ಟಿದ್ದಾರೆ. ಮೃತರನ್ನು ಭಾನುರಾಮ್ (35), ಮಹೇಂದ್ರ (33), ಆಶೀಶ್ (15), ಸುಗ್ಮಾ ದೇವಿ (35) ಮತ್ತು ಭೋರಿ ದೇವಿ (95) ಎಂದು ಗುರುತಿಸಲಾಗಿದೆ.
ರಾಜಸ್ಥಾನದ ಜೈಪುರ ಜಿಲ್ಲೆಯ ಸಮೋದ್ ಗ್ರಾಮದ ನಿವಾಸಿಗಳಾದ ಇವರು, ಸೋಮವಾರ ಬೆಳಗ್ಗೆ ಹರಿದ್ವಾರದಲ್ಲಿ ಸಂಬಂಧಿಕರೊಬ್ಬರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಒಟ್ಟು 17 ಜನರು ಒಂದೇ ಕ್ರೂಸರ್ನಲ್ಲಿ ಹೋಗಿ ಮರಳಿ ತಮ್ಮೂರಿಗೆ ಬರುತ್ತಿದ್ದರು. ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ದೆಹಲಿ-ಜೈಪುರ ಹೆದ್ದಾರಿ ಬರುತ್ತಿದ್ದಾಗ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ-2:: ಬಿಹಾರದ ಪಶ್ಚಿಮ ಚಂಪಾರಣ ಜಿಲ್ಲೆಯ ವಾಲ್ಮೀಕಿ ನಗರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮರಕ್ಕೆ ಕಾರು ಗುದ್ದಿದ್ದು, ಒಂದೇ ಕುಟುಂಬದ ಇಬ್ಬರು ಮಕ್ಕಳು ನಾಲ್ವರು ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ತೆರಳಿ ಮರಳಿ ಬರುತ್ತಿದ್ಧಾಗ ದುರ್ಘಟನೆ ಸಂಭವಿಸಿದೆ.
ಘಟನೆ-3: ಉತ್ತರ ಪ್ರದೇಶದ ಲಖನೌ ಮತ್ತು ಆಗ್ರಾ ಹೆದ್ದಾರಿಯಲ್ಲಿ ಬಸ್ ಪಲ್ಟಿ ಹೊಡೆದು ಇಬ್ಬರು ಪ್ರಯಾಣಿಕರು ಮೃತಪಟ್ಟರು. ಇತರೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ, ಇತರರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಈ ಬಸ್ ಬಿಹಾರದಿಂದ ರಾಜಸ್ಥಾನಕ್ಕೆ ಹೊರಟಿತ್ತು. ಇದರಲ್ಲಿ ಸುಮಾರು 50 ಜನ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ವಿಷಯ ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರು.
ಇದನ್ನೂ ಓದಿ: ಬೆಂಗಳೂರಲ್ಲಿ ಫ್ಯಾಟ್ ಸರ್ಜರಿ ವೇಳೆ ನಟಿ ಸಾವು