ನವದೆಹಲಿ: ದೇಶದ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 13 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಮತ್ತು 11 ಲಕ್ಷಕ್ಕೂ ಹೆಚ್ಚು ಸಹಾಯಕರು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ವಿಮೆ ಸೌಲಭ್ಯ ಪಡೆಯಲಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು 50 ಲಕ್ಷ ರೂಪಾಯಿಗಳ ವಿಮೆಯನ್ನು ಪಡೆಯಲಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.