ಗಡ್ಚಿರೋಲಿ (ಮಹಾರಾಷ್ಟ್ರ): ನಕ್ಸಲರು ಹಾಗೂ ಮಹಾರಾಷ್ಟ್ರ ಪೊಲೀಸರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ 14 ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆಯುತ್ತಿದೆ. 14 ನಕ್ಸಲರನ್ನು ಹತೈಗೈಯ್ಯಲಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡ್ಚಿರೋಲಿ ಡಿಐಜಿ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ತಮಿಳುನಾಡಿನ ಹಳ್ಳಿಗಳಲ್ಲಿ ಕರ್ನಾಟಕದ ಮದ್ಯ ಮಾರಾಟ... ಐವರ ಬಂಧನ
ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.