ETV Bharat / bharat

ಜಿಲ್ಲಾ ನ್ಯಾಯಾಧೀಶರ ಕೊಠಡಿ ಧ್ವಂಸ: 14 ವಕೀಲರ ಬಂಧನ, ಬಾರ್ ಕೌನ್ಸಿಲ್​ನಿಂದ ಅಮಾನತು - ETV Bharath Kannada

ಜಿಲ್ಲಾ ನ್ಯಾಯಾಧೀಶರ ಕೊಠಡಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದಲ್ಲಿ 14 ಜನ ವಕೀಲರನ್ನು ಬಂಧಿಸಲಾಗಿದೆ.

Etv Bharat
14 ಜನ ವಕೀಲರ ಬಂಧನ,
author img

By

Published : Dec 13, 2022, 1:03 PM IST

ಸಂಬಲ್‌ಪುರ(ಒಡಿಶಾ): ಜಿಲ್ಲೆಯಲ್ಲಿ ಒಡಿಶಾ ಹೈಕೋರ್ಟ್‌ ಪೀಠ ಸ್ಥಾಪನೆಗೆ ಆಗ್ರಹಿಸಿ ಸಂಬಲ್‌ಪುರ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ವೇಳೆ ಜಿಲ್ಲಾ ನ್ಯಾಯಾಧೀಶರ ಕೊಠಡಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 14 ವಕೀಲರನ್ನು ನಿನ್ನೆ ತಡರಾತ್ರಿ ಬಂಧಿಸಲಾಗಿದೆ.

ಇದುವರೆಗೆ ಜಿಲ್ಲಾ ನ್ಯಾಯಾಧೀಶರ ಕೊಠಡಿಯಲ್ಲಿ ವಿಧ್ವಂಸಕ ಕೃತ್ಯ ಎಸಗಿದ ಹಲವರನ್ನು ಬಂಧಿಸಿದ್ದೇವೆ. ಅವರಲ್ಲಿ ಒಂಬತ್ತು ಮಂದಿಯನ್ನು ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸಲಾಗುವುದು ಸಂಬಲ್‌ಪುರ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳವಾದ ಕಚೇರಿಯ ಜಾಗದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಸುತ್ತಮುತ್ತ 200 ಮೀಟರ್​ ಪ್ರದೇಶವನ್ನು ನಿರ್ಬಂಧಕ್ಕೆ ಒಳಪಡಿಸಲಾಗಿದೆ. ಇಂದಿನಿಂದ 18 ತಿಂಗಳ ಅವಧಿಗೆ 29 ಪ್ರತಿಭಟನಾಕಾರರ ಪರವಾನಗಿಯನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕಾಶ್ಮೀರದ ತುಬಲ್​ ಪ್ರದೇಶದಲ್ಲಿ ಐಇಡಿ ಸ್ಫೋಟಕ ವಸ್ತು ಪತ್ತೆ: ಬಿಡಿಎಸ್​ ಕಾರ್ಯಾಚರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.