ನವದೆಹಲಿ: ಅ. 28 ರಿಂದ ನವೆಂಬರ್ 4ರ ನಡುವೆ ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ದೆಹಲಿ ಪೊಲೀಸರು ಒಟ್ಟು 281 ಜನರನ್ನು ಬಂಧಿಸಿದ್ದಾರೆ ಮತ್ತು 201 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.
ಶುಕ್ರವಾರ ಪೊಲೀಸ್ ಪ್ರಧಾನ ಕಚೇರಿಯು ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ರೋಹಿಣಿ ಮತ್ತು ಪಶ್ಚಿಮ ದೆಹಲಿಯಲ್ಲಿ ಗರಿಷ್ಠ ಪಟಾಕಿ ಸಿಡಿಸಿರುವ ಪ್ರಕರಣಗಳು ವರದಿಯಾಗಿವೆ. ಪಟಾಕಿ ಸಿಡಿಸಿದ್ದಕ್ಕಾಗಿ 210 ಪ್ರಕರಣಗಳು ದಾಖಲಾಗಿದ್ದು, 143 ಜನರನ್ನು ಬಂಧಿಸಲಾಗಿದೆ. ಪಟಾಕಿ ಮಾರಾಟ/ಪೂರೈಕೆಗಾಗಿ 125 ಪ್ರಕರಣಗಳು ದಾಖಲಾಗಿವೆ. ರಾಷ್ಟ್ರ ರಾಜಧಾನಿಯಾದ್ಯಂತ ಪಟಾಕಿ ಮಾರಾಟ ಮಾಡಿದ 138 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯ ವಿವಿಧ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ದೀಪಾವಳಿ ದಿನದಂದು ಪೊಲೀಸರಿಗೆ ಒಟ್ಟು 143 ಪಿಸಿಆರ್ ಕರೆಗಳು ಬಂದಿವೆ ಎಂದು ಪೊಲೀಸ್ ಪ್ರಧಾನ ಕಚೇರಿ ಹೇಳಿಕೆಯಲ್ಲಿ ಬಹಿರಂಗಪಡಿಸಿದೆ. ಈ ಅವಧಿಯಲ್ಲಿ 19,702.489 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.