ಕೊಚ್ಚಿ: ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಚಾಲಾಕಿ ಪ್ರಯಾಣಿಕ ಸಿಕ್ಕಿಬಿದ್ದಿರುವ ಘಟನೆ ಕೇರಳದ ಕನ್ನೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಪ್ರಯಾಣಿಕ ತನ್ನ ಪಾದಗಳ ಸುತ್ತಲೂ ಚಿನ್ನವನ್ನು ಸುತ್ತಿಕೊಂಡು ದುಬೈನಿಂದ ಕನ್ನೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಏರ್ಪೋರ್ಟ್ನಲ್ಲಿ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ಆರೋಪಿಯನ್ನು ಬಂಧಿಸಿ, ಆತನಿಂದ 1456 ಗ್ರಾಂ. ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.