ETV Bharat / bharat

ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ: ಭಾರತದ 15 ಯೋಧರಿಗೆ ಗಾಯ! - ಭಾರತ-ಚೀನಾ ಯೋಧರ ಸಂಘರ್ಷ

ಸಿಕ್ಕಿಂನ ನಾಕು ಲಾ ಗಡಿಭಾಗದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ನಡೆದಿದ್ದು, ಭಾರತದ 15 ಯೋಧರು ಗಾಯಗೊಂಡಿರುವ ಮಾಹಿತಿ ಬಹಿರಂಗಗೊಂಡಿದೆ.

India and China
India and China
author img

By

Published : Jan 25, 2021, 6:44 PM IST

ನವದೆಹಲಿ: ಭಾರತ-ಚೀನಾ ಯೋಧರ ನಡುವೆ ಕಳೆದ ವಾರ ಸಿಕ್ಕಿಂನ ನಾಕು ಲಾ ಗಡಿ ಭಾಗದಲ್ಲಿ ಸಂಘರ್ಷ ನಡೆದಿದ್ದು, ಇದರಲ್ಲಿ 15 ಭಾರತೀಯ ಯೋಧರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಇದರ ಬೆನ್ನಲ್ಲೇ ಕೆಲ ಚೀನಾ ಯೋಧರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ ಗಲ್ವಾನ್ ವ್ಯಾಲಿ ಪ್ರದೇಶದಲ್ಲಿ ನಡೆದ ಘರ್ಷಣೆ ವೇಳೆ ಭಾರತದ 20 ಯೋಧರು ಹುತಾತ್ಮರಾಗಿದ್ದು, ಇದಾದ ಬಳಿಕ ಉಭಯ ದೇಶಗಳ ನಡುವೆ ಅನೇಕ ಸುತ್ತಿನ ಮಿಲಿಟರಿ ಮಾತುಕತೆ ನಡೆದಿವೆ. ಅದರಂತೆ ಕಳೆದ ಎರಡು ದಿನಗಳ ಹಿಂದೆ ಸಹ 9ನೇ ಸುತ್ತಿನ ಕಾರ್ಪ್ಸ್​ ಮಾತುಕತೆ ನಡೆದಿದೆ. ಇದಕ್ಕೂ ಮುಂಚಿತವಾಗಿ ಭಾರತ-ಚೀನಾ ಯೋಧರು ಸಂಘರ್ಷ ನಡೆಸಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಕ್ಕಿಂನಲ್ಲಿ ಭಾರತ-ಚೀನಾ ಸೈನಿಕರ ನಡುವೆ ನಡೆದಿತ್ತು ಸಂಘರ್ಷ: ಸ್ಫೋಟಕ ಮಾಹಿತಿ ಬಹಿರಂಗ

ಭಾರತೀಯ ಯೋಧರು ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಈ ಸಂಘರ್ಷ ಉಂಟಾಗಿದೆ. ಜನವರಿ ತಿಂಗಳಲ್ಲಿ ನಡೆದಿದ್ದ ಘರ್ಷಣೆಯಲ್ಲಿ ಇಬ್ಬರು ಅಧಿಕಾರಿಗಳು, ಮೂವರು ಭಾರತೀಯ ಯೋಧರು ಗಾಯಗೊಂಡಿದ್ದರು. ಇದಾದ ಬಳಿಕ ಸಿಕ್ಕಿಂನ ನಾಕು ಲಾ ಗಡಿ ಭಾಗದಲ್ಲಿ ಮತ್ತೊಮ್ಮೆ ಎರಡು ಸೇನೆ ನಡುವೆ ಸಂಘರ್ಷ ಉಂಟಾಗಿದ್ದು, ಸ್ಥಳೀಯ ಮಟ್ಟದ ಅಧಿಕಾರಿಗಳು ಈ ಸಮಸ್ಯೆ ಬಗೆಹರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.