ಪಟ್ನಾ(ಬಿಹಾರ): ಪಾಟ್ನಾದ ಐಐಟಿಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದ್ದು, ಎಲ್ಲರನ್ನೂ ಪ್ರತ್ಯೇಕಿಸಲಾಗಿದೆ.
ಮಾಹಿತಿಯ ಪ್ರಕಾರ, ಹೋಳಿ ರಜೆಗೆಂದು ಈ ವಿದ್ಯಾರ್ಥಿಗಳು ಮನೆಗೆ ತೆರಳಿದ್ದರು. ನಂತರ ಹಬ್ಬ ಮುಗಿಸಿ ಕಾಲೇಜಿಗೆ ವಾಪಸ್ ಆಗಿದ್ದು, ಈ ವೇಳೆ ನಡೆಸಿದ ಕೊರೊನಾ ಟೆಸ್ಟ್ ರಿಪೋರ್ಟ್ನಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.
ವಿದ್ಯಾರ್ಥಿ ನಿಲಯವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಸೋಂಕಿತರನ್ನು ಪ್ರತ್ಯೇಕಿಸಲಾಗಿದೆ. ಇವರ ಸಂಪರ್ಕಕ್ಕೆ ಬಂದ ಇತರೆ ವಿದ್ಯಾರ್ಥಿಗಳನ್ನು ಸಹ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.