ನವದೆಹಲಿ : ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅನಾಥಾಶ್ರಮದಲ್ಲಿ ವಿಶೇಷ ಚೇತನ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಸೆಕ್ಯುರಿಟಿ ಗಾರ್ಡ್ ಈ ಕೃತ್ಯವೆಸಗಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಕಳೆದ ಜನವರಿ 31ರಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ತಪಾಸಣೆಗೊಳಪಡಿಸಿದಾಗ ಬಾಲಕಿ ಗರ್ಭಿಣಿ ಎಂಬುದು ಗೊತ್ತಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಡಿಸಿಪಿ ಗೌರವ್ ಶರ್ಮಾ ತಿಳಿಸಿದ್ದಾರೆ.
ಇದನ್ನೂ ಓದಿರಿ: ನಕ್ಸಲ್‌ರಿಂದ ನೆಲ ಬಾಂಬ್ ಸ್ಫೋಟ : ಒಡಿಶಾದಲ್ಲಿ ಪತ್ರಕರ್ತ ಬಲಿ
ಅನಾಥಾಶ್ರಮದಲ್ಲಿ ಮಹಿಳಾ ಉದ್ಯೋಗಿಗಳು ಮಾತ್ರ ಕೆಲಸ ಮಾಡ್ತಿದ್ದಾರೆ. ಸೆಕ್ಯುರಿಟಿ ಗಾರ್ಡ್ನಾಗಿ ಓರ್ವ ವ್ಯಕ್ತಿ ಇದ್ದಾನೆ. ಆದರೆ, ಆತ ಅನಾಥಾಶ್ರಮದೊಳಗೆ ಬರಲು ಅವಕಾಶವಿಲ್ಲ. ಇದರ ಮಧ್ಯೆ ಕೂಡ ಈ ಪ್ರಕರಣ ಬೆಳಕಿಗೆ ಬಂದಿರುವುದು ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭ ಮಾಡಿದ್ದು, ಸೆಕ್ಯುರಿಟಿ ಗಾರ್ಡ್ಗೆ ವಿಚಾರಣೆಗೊಳಪಡಿಸಿದ್ದಾರೆ. ಜೊತೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. 16 ವರ್ಷದ ವಿಶೇಷ ಚೇತನ ಬಾಲಕಿ ಕಳೆದ ಮೂರು ವರ್ಷಗಳ ಹಿಂದೆ ಈ ಅನಾಥಾಶ್ರಮಕ್ಕೆ ಬಂದಿದ್ದಾಳೆಂದು ವರದಿಯಾಗಿದೆ.