ಇಂದೋರ್ (ಮಧ್ಯಪ್ರದೇಶ): ಕೊರೊನಾ ಆರ್ಭಟದ ನಡುವೆ ಔಷಧಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ಕೋವಿಡ್ ರೋಗಿಗಳಿಗೆ ಜೀವ ಉಳಿಸುವ ಚುಚ್ಚುಮದ್ದು ಮತ್ತು ಔಷಧಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.
ವಿಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು 11 ಆರೋಪಿಗಳನ್ನು ಏಕಕಾಲದಲ್ಲಿ ಬಂಧಿಸಿದ್ದಾರೆ. ವಿಜಯ್ ನಗರ ಪೊಲೀಸ್ ಠಾಣೆ ಪೊಲೀಸರರು ಈವರೆಗೆ 17 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ನಕಲಿ ಚುಚ್ಚುಮದ್ದನ್ನು ಮಾರಾಟ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಗುಜರಾತ್‌ನ ಮೊರ್ಬಿಯಲ್ಲಿ ನಕಲಿ ಕಾರ್ಖಾನೆಯಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಸಿದ್ಧಪಡಿಸುತ್ತಿದ್ದರು. ಬಳಿಕ ಇಂದೋರ್‌ಗೆ ತಂದು ಮಾರುತ್ತಿದ್ದರು. ಹೀಗೆ ಸುಮಾರು ಒಂದು ಸಾವಿರ ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಮಾರಿದ್ದಾರೆ.