ಪಾಕುರ್(ಜಾರ್ಖಂಡ್): ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ನಿನ್ನೆ ಬೆಳಗ್ಗೆ ಬಸ್ ಮತ್ತು ಗ್ಯಾಸ್ ತುಂಬಿದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 17 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮ್ರಪಾರ ಪೊಲೀಸ್ ಠಾಣಾ ವ್ಯಾಪ್ತಿಯ ಪದೆರ್‌ಕೋಲಾ ಗ್ರಾಮದ ಗೋವಿಂದಪುರ- ಸಾಹಿಬ್‌ಗಂಜ್ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ಬೆಳಗ್ಗೆ 8.30 ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಸುಮಾರು 40 ಪ್ರಯಾಣಿಕರಿದ್ದ ಬಸ್, ಸಾಹಿಬ್‌ಗಂಜ್‌ನ ಬರ್ಹರ್ವಾದಿಂದ ದಿಯೋಘರ್ ಜಿಲ್ಲೆಯ ಜಸಿದಿಹ್‌ಗೆ ತೆರಳುತ್ತಿತ್ತು. ಈ ಪ್ರದೇಶದಲ್ಲಿ ದಟ್ಟವಾದ ಮಂಜು ಮುಸುಕಿದ ವಾತಾವರಣವಿದ್ದ ಹಿನ್ನೆಲೆ ಮುಂಭಾಗದಿಂದ ಎಲ್‌ಪಿಜಿ ಸಿಲಿಂಡರ್ ತುಂಬಿಕೊಂಡು ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ 17 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ. ಜೊತೆಗೆ ಟ್ರಕ್‌ನಲ್ಲಿದ್ದ ಯಾವುದೇ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಜಿಲ್ಲಾಡಳಿತ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಅಷ್ಟೇ ಅಲ್ಲದೆ, ಘಟನೆ ಕುರಿತು ಟ್ವೀಟ್ ಮಾಡಿ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
''ಜಾರ್ಖಂಡ್‌ನ ಪಾಕೂರ್ನಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ನಾನು ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಪಾಕುರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ PMNRF ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು'' ಎಂದು ಟ್ವೀಟ್ ಮೂಲಕ ಮೋದಿ ತಿಳಿಸಿದ್ದಾರೆ.
-
I am anguished by the bus accident in Pakur, Jharkhand. In this sad hour, condolences to the bereaved families. May the injured recover soon: PM @narendramodi
— PMO India (@PMOIndia) January 5, 2022 " class="align-text-top noRightClick twitterSection" data="
">I am anguished by the bus accident in Pakur, Jharkhand. In this sad hour, condolences to the bereaved families. May the injured recover soon: PM @narendramodi
— PMO India (@PMOIndia) January 5, 2022I am anguished by the bus accident in Pakur, Jharkhand. In this sad hour, condolences to the bereaved families. May the injured recover soon: PM @narendramodi
— PMO India (@PMOIndia) January 5, 2022
ಓದಿ:ದಟ್ಟ ಮಂಜಿನಲ್ಲಿ ಗ್ಯಾಸ್ ತುಂಬಿದ ಲಾರಿ - ಬಸ್ ಮುಖಾಮುಖಿ ಡಿಕ್ಕಿ.. 16 ಸಾವು, 15 ಪ್ರಯಾಣಿಕರಿಗೆ ಗಾಯ!
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೂಡ ಅಪಘಾತಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. 'ಜಾರ್ಖಂಡ್‌ನ ಪಾಕುರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಸಾವನ್ನಪ್ಪಿದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ' ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.