ETV Bharat / bharat

ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಆಗ್ರಹ: 18 ಲಕ್ಷ ಸರ್ಕಾರಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ.. - ಅಹಮದ್‌ನಗರ ಜಿಲ್ಲಾಧಿಕಾರಿ

10 ಮತ್ತು 12ನೇ ತರಗತಿ ವಾರ್ಷಿಕ ಪರೀಕ್ಷೆ ನಡೆಯುತ್ತಿರುವಾಗಲೇ, ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಆಗ್ರಹಿಸಿ ಮಹಾರಾಷ್ಟ್ರದ ಮುಂಬೈನಲ್ಲಿ 18 ಲಕ್ಷ ಸರ್ಕಾರಿ ನೌಕರರಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಮುಷ್ಕರವು ತೀವ್ರ ಸ್ವರೂಪ ಪಡೆದುಕೊಂಡಿದೆ.

18 lakh government Govt Employees Strike
ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಆಗ್ರಹ
author img

By

Published : Mar 14, 2023, 8:55 PM IST

ಮುಂಬೈ (ಮಹಾರಾಷ್ಟ್ರ ): 10ಮತ್ತು 12ನೇ ತರಗತಿ ವಾರ್ಷಿಕ ಪರೀಕ್ಷೆ ನಡೆಯುತ್ತಿರುವ ವೇಳೆಯಲ್ಲಿಯೇ, ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಆಗ್ರಹಿಸಿ ಮಹಾರಾಷ್ಟ್ರದ ಮುಂಬೈನಲ್ಲಿ 18 ಲಕ್ಷ ಸರ್ಕಾರಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಿದೆ. ಹೌದು, ಮಹಾರಾಷ್ಟ್ರ ಸರ್ಕಾರವು ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದರೂ ಕೂಡಾ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಜಾರಿಗೊಳಿಸಲು ಒತ್ತಾಯಿಸಿ, ಸುಮಾರು 18 ಲಕ್ಷ ನೌಕರರು ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಒಪಿಎಸ್‌ಗಾಗಿ ಒತ್ತಾಯಿಸಿ, ಇಂದಿನಿಂದ ಪ್ರಾರಂಭವಾಗಿರುವ ಮುಷ್ಕರದಲ್ಲಿ ರಾಜ್ಯ ಸರ್ಕಾರ ಮತ್ತು ಸರ್ಕಾರದ ವಿವಿಧ ನಾಗರಿಕ ಸಂಸ್ಥೆಗಳು, ನೈರ್ಮಲ್ಯ ಕಾರ್ಯಕರ್ತರು ಮತ್ತು ಶಿಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದಾರೆ.

ಅನೇಕ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ: ಈ ಮುಷ್ಕರದಲ್ಲಿ ಮುಂಬೈನ ಜೆಜೆ ಆಸ್ಪತ್ರೆಯ ಗ್ರೇಡ್-III ಮತ್ತು IV ನೌಕರರು ಸಹ ಭಾಗವಹಿಸಿದ್ದಾರೆ. ಈ ಹಿಂದೆಯೂ ದೊಡ್ಡ ಮಟ್ಟದಲ್ಲಿ ಮುಷ್ಕರ ನಡೆಸಲಾಗಿತ್ತು. ಆದರೆ, ಇದರಿಂದ ಯಾವುದೇ ಪ್ರಯೋಜನಗಳು ಆಗಲಿಲ್ಲ. ಜೆಜೆ ಆಸ್ಪತ್ರೆಯ ನೌಕರರು ಘೋಷಣೆಗಳನ್ನು ಕೂಗಿ ಬೇಡಿಕೆ ಈಡೇರುವವರೆಗೂ ಧರಣಿ ಮುಂದೆವರಿಸುವುದಾಗಿ ಎಚ್ಚರಿಕೆ ನೀಡಿದರು. ಮುಷ್ಕರದಲ್ಲಿ ಅರೆವೈದ್ಯರು ಮತ್ತು ಶಿಕ್ಷಕರು ಭಾಗವಹಿಸುವುದರಿಂದ ಆಡಳಿತದ ಕಾರ್ಯನಿರ್ವಹಣೆಗೆ ಅಡ್ಡಿ ಉಂಟಾಗುತ್ತದೆ. ಅನೇಕ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ.

ನೌಕರರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ: ಹತ್ತನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ಶಿಕ್ಷಕರು ಕೂಡ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಸೋಮವಾರ ರಾಜ್ಯ ಸರ್ಕಾರ ಮತ್ತು ಒಕ್ಕೂಟಗಳ ನಡುವೆ ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ನೌಕರರು ಮುಷ್ಕರಕ್ಕೆ ಮುಂದಾದರು. ಮುಷ್ಕರ ಕೈಗೊಂಡಿರುವ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಹೇಳಿದ್ದೇನು?: ನೌಕರರ ಮುಷ್ಕರದ ಮಧ್ಯೆಯೇ, ಅಹಮದ್‌ನಗರ ಜಿಲ್ಲಾಧಿಕಾರಿ ಸಿದ್ಧರಾಮ ಸಾಲಿಮಠ ಮಾತನಾಡಿ, ಅಗತ್ಯ ಸೇವೆಗಳು ನಿಯಮಿತವಾಗಿ ಮುಂದುವರಿಯುವಂತೆ ನೋಡಿಕೊಳ್ಳಲು ಸೂಚಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸುವ ನೌಕರರಿಗೆ ವೇತನವನ್ನು ಜಮಾ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಆಸ್ಪತ್ರೆಗಳು, ನೀರು ಸರಬರಾಜು, ನೈರ್ಮಲ್ಯ ಮತ್ತು ಹತ್ತನೇ ಮತ್ತು 12ನೇ ತರಗತಿ ಪರೀಕ್ಷೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸೇವೆಗಳ ಸುಗಮ ಕಾರ್ಯನಿರ್ವಹಣೆ ಸೇರಿದಂತೆ ಮಹಾರಾಷ್ಟ್ರ ಅಗತ್ಯ ಸೇವೆಗಳ ಕಾಯ್ದೆ ಅಡಿ ಘೋಷಿಸಲಾದ ಸರ್ಕಾರಿ ಸೇವೆಗಳು ಅಡೆತಡೆಯಿಲ್ಲದೇ ಮುಂದುವರಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸರ್ಕಾರಿ ನೌಕರರ ಮನವೊಲಿಸುವ ಯತ್ನ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಪ್ರತಿಭಟನಾ ನಿರತ ನೌಕರರನ್ನು ಸಮಾಧಾನಪಡಿಸುವ ಪ್ರಯತ್ನಕ್ಕೆ ಸೋಮವಾರ ಮುಂದಾಗಿದ್ದರು. ಹಳೆಯ ಪಿಂಚಣಿ ಯೋಜನೆಗೆ ಮರಳಲು ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ಘೋಷಿಸಿದರು. ಸಮಿತಿಯು ತನ್ನ ವರದಿಯನ್ನು ಕಾಲಮಿತಿಯಲ್ಲಿ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದರು. ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸರ್ಕಾರಿ ನೌಕರರು ಮುಷ್ಕರವನ್ನು ಹಿಂಪಡೆಯುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಆನ್‌ಲೈನ್​ನಲ್ಲಿ ಸೋರಿಕೆಯಾದ ಟಿಕ್ ಟಾಕ್ ತಾರೆಯ ಖಾಸಗಿ ವಿಡಿಯೋ.. ಸ್ನೇಹಿತರಿಂದಲೇ ಕೃತ್ಯ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.