ETV Bharat / bharat

ದಾರುಣ.. ತಂಗಿಯ ಮುಂದೆ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ವಿದ್ಯಾರ್ಥಿಗಳು! - ಉನಾವ್​ ಪೊಲೀಸ್​ ಠಾಣಾ ವ್ಯಾಪ್ತಿ

ಸಹೋದರಿಯರಿಬ್ಬರನ್ನು ಅಪಹರಿಸಿ ತಂಗಿ ಮುಂದೆ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ನಡೆದಿದೆ.

woman gang raped in MP  victim attempts suicide after incident  3 out of 4 accused detained  ತಂಗಿಯ ಮುಂದೆ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ  ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ವಿದ್ಯಾರ್ಥಿಗಳು  ಅಪಹರಿಸಿ ತಂಗಿ ಮುಂದೆ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ  ಮಧ್ಯಪ್ರದೇಶದ ದಾತಿಯಾ ಜಿಲ್ಲೆ  ಜಿಲ್ಲೆಯಲ್ಲಿ ದಾರುಣ ಘಟನೆ  ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ  ಉನಾವ್​ ಪೊಲೀಸ್​ ಠಾಣಾ ವ್ಯಾಪ್ತಿ  ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಕಿಡ್ನ್ಯಾಪ್​
ತಂಗಿಯ ಮುಂದೆ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ವಿದ್ಯಾರ್ಥಿಗಳು!
author img

By

Published : Jul 15, 2023, 8:19 PM IST

ದಾತಿಯಾ, ಮಧ್ಯಪ್ರದೇಶ: ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ನಾಲ್ವರು ಯುವಕರು ಇಬ್ಬರು ಸಹೋದರಿಯರನ್ನು ಅಪಹರಿಸಿದಲ್ಲದೇ, ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕಿರಿಯಳಿಗೆ ಕಿರುಕುಳ ನೀಡಿರುವ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ. ಉನಾವ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಪೊಲೀಸರು ಇದುವರೆಗೆ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಿದ್ದಾರೆ.

ಉನಾವ್​ ಪೊಲೀಸ್​ ಠಾಣಾ ವ್ಯಾಪ್ತಿಯ 19 ವರ್ಷದ ಯುವತಿ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯ ನಂತರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕಿರಿಯ ಸಹೋದರಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ನನ್ನ ಮತ್ತು ಅಕ್ಕನನ್ನು ನಾಲ್ವರು ಅಪಹರಿಸಿದ್ದರು. ಆರೋಪಿಗಳು ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ನಮ್ಮ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆರೋಪಿಗಳು ನನಗೂ ಕಿರುಕುಳ ನೀಡಿದ್ದರು. ಘಟನೆಯ ನಂತರ ನಾವು ಮನೆಗೆ ಬಂದಿದ್ದೇವೆ. ಮನೆಗೆ ಬಂದಾಗ ಅಕ್ಕ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಸಂತ್ರಸ್ತೆಯ ಕಿರಿಯ ಸಹೋದರಿ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪ್ರದೀಪ್ ಶರ್ಮಾ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಕಿಡ್ನಾಪ್​​: ದೂರಿನ ಪ್ರಕಾರ, ಇಬ್ಬರು ಸಹೋದರಿಯರು ಎಂದಿನಂತೆ ಶುಕ್ರವಾರ ತಮ್ಮ ತರಗತಿಗಳನ್ನ​ ಮುಗಿಸಿ ಮನೆಗೆ ಮರಳುತ್ತಿದ್ದರು. ಇದೇ ವೇಳೆ ದಾರಿ ಮಧ್ಯೆ ಶಾಲೆಯ 4 ವಿದ್ಯಾರ್ಥಿಗಳು ಈ ಅಮಾಯಕ ಬಾಲಕಿಯರನ್ನು ತಡೆದು ಕಿರುಕುಳ ನೀಡಲು ಮುಂದಾದರು. ವಿಷಯ ಕೇವಲ ಕಿರುಕುಳಕ್ಕೆ ಸೀಮಿತವಾಗದೇ, ಇಬ್ಬರು ಸಹೋದರಿಯರಲ್ಲಿ ಒಬ್ಬರನ್ನು ಎತ್ತಿಕೊಂಡು ತಮ್ಮೊಂದಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಪರಾರಿಯಾಗಿದ್ದಾರೆ. ಈ ಘಟನೆಯಿಂದ ಮನನೊಂದ ಈ ವಿದ್ಯಾರ್ಥಿ ಆತ್ಮಹತ್ಯೆಗೂ ಯತ್ನಿಸಿದ್ದಾಳೆ. ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದ್ದು ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಠಾಣೆ ಮೆಟ್ಟಿಲೇರಿದ ಜನ: ವಿಷಯ ಪೊಲೀಸರ ಗಮನಕ್ಕೆ ಬಂದ ತಕ್ಷಣ ತನಿಖೆ ಆರಂಭಿಸಿದರಾದರೂ ತಡರಾತ್ರಿಯವರೆಗೂ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದೇ ಇದ್ದಾಗ ಆಕ್ರೋಶಗೊಂಡ ಊರಿನ ಜನರು ಪೊಲೀಸರನ್ನು ಸುತ್ತುವರೆದರು. ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಗಲಾಟೆ ನಂತರ ಪೊಲೀಸರು ಕ್ರಮ ಕೈಗೊಳ್ಳಲು ಮುಂದೆ ಬಂದರು. ಪ್ರಕರಣದಲ್ಲಿ 4 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದರು. ಬಳಿಕ ಎಫ್‌ಐಆರ್‌ ಪ್ರತಿ ನೀಡಿದ ಬಳಿಕ ಗ್ರಾಮಸ್ಥರು ಸಮಾಧಾನಗೊಂಡರು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿಸಿದ ಮೂವರು ಆರೋಪಿಗಳ ವಯಸ್ಸನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ. ಈ ಪ್ರಕರಣ ಕುರಿತು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ .

ಓದಿ: ಕೊನೆಗೂ 489 ದಿನಗಳ ಜೈಲುವಾಸ ಅಂತ್ಯ: ಅತ್ಯಾಚಾರ, ಅಪಹರಣ ಪ್ರಕರಣದ ಬಾಲಾಪರಾಧಿಗೆ ಸುಪ್ರೀಂಕೋರ್ಟ್ ಜಾಮೀನು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.