ಜೈಪುರ: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಾಲಾಪರಾಧಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದರ್ಶಹರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವೃತ್ತ ಅಧಿಕಾರಿ ನಾರಾಯಣ್ ಕುಮಾರ್ ತಿಳಿಸಿದ್ದಾರೆ. ಇನ್ನು ಫೆಬ್ರವರಿ 8ರಂದು ಅಪ್ರಾಪ್ತೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೋಷಕರು ದೂರು ದಾಖಲು ಮಾಡಿದ್ದರು. ಪ್ರಕರಣ ಸಂಬಂಧ ಆರೋಪಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.