ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪರಿಣಾಮ 4 ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೂವರನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕದಳ ಯಶಸ್ವಿಯಾಗಿದೆ.
ಸಬ್ಜಿ ಮಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಟ್ಟಡ ಕುಸಿತ ಸಂದರ್ಭದಲ್ಲಿ ಅದರ ಪಕ್ಕದಲ್ಲಿ ಆಟವಾಡುತ್ತಿದ್ದ ಅಪ್ರಾಪ್ತ ಅಣ್ಣ-ತಮ್ಮ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.
ಇದನ್ನೂ ಓದಿ: ನಾನು ಸತ್ತಿಲ್ಲ, ಬದುಕಿದ್ದೇನೆ, ತಾಲಿಬಾನ್ ಸಹ ಸಂಸ್ಥಾಪಕನ ಆಡಿಯೋ ಕ್ಲಿಪ್ ರಿಲೀಸ್!
ಅವಶೇಷದಡಿ ಸಿಲುಕಿದ್ದ 72 ವರ್ಷದ ರಾಮ್ಜಿ ದಾಸ್ ಸೇರಿದಂತೆ ಮೂವರ ರಕ್ಷಣೆ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಜಂಟಿ ಪೊಲೀಸ್ ಕಮಿಷನರ್ ಎನ್.ಎಸ್ ಬುಂದೇಲಾ ತಿಳಿಸಿದ್ದಾರೆ. ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಈ ದುರ್ಘಟನೆ ಸಂಭವಿಸಿದ್ದು, 75 ವರ್ಷಗಳ ಹಳೆಯ ಕಟ್ಟಡ ಇದಾಗಿದೆ ಎಂದು ತಿಳಿಸಿದ್ದಾರೆ.