ಮಲ್ಕಂಗಿರಿ : ಒಡಿಶಾದ ಮಲ್ಕಂಗಿರಿ ಜಿಲ್ಲೆಯ ಸ್ವಾಭಿಮಾನ್ ಅಂಚಲ್ನ ಗಜಲ್ಮಮುಡಿ ಪ್ರದೇಶದಲ್ಲಿ ಭದ್ರತಾ ಪಡೆಯೊಂದಿಗಿನ ಗುಂಡಿನ ಚಕಮಕಿಯ ವೇಳೆ ಇಬ್ಬರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಈ ಪ್ರದೇಶದಲ್ಲಿ ಎಸ್‌ಒಜಿ ಮತ್ತು ಡಿವಿಎಫ್ ಜವಾನರ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಮಾವೋವಾದಿಗಳು ಗುಂಡಿನದಾಳಿ ನಡೆಸಿದ್ದಾರೆ. ಇದಕ್ಕೆ ಭದ್ರತಾ ಪಡೆಯೂ ಸಹ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಐಯ್ ನನ್ ಶಿವ್ನಾ, ಈ ಬಸ್ ಇಲ್ದಂಗಾಗಿ ಮಾವನ ಮಣ್ಣಿಗೂ ಹೋಗೋಕಾಗವಲ್ದು..
ಬಳಿಕ ಘಟನಾ ಸ್ಥಳದಲ್ಲಿ ಹೆಚ್ಚಿನ ಶೋಧ ಮತ್ತು ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.