ಶಿವಪುರಿ(ಮಧ್ಯಪ್ರದೇಶ) : ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋಮವಾರ ಸಂಜೆ ಸುಲಾರ್ ನದಿಯ ಕಾಲುವೆಯ ಬಳಿಯ ಗಣಿಯಲ್ಲಿ ಈ ಘಟನೆ ನಡೆದಿದೆ ಎಂದು ಬಾಮೋರ್ ಕಾಲಾ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುಹೆಯ ಆಕಾರದಲ್ಲಿದ್ದ ಗಣಿಯಲ್ಲಿ ಆಳಕ್ಕೆ ತೆರಳಿದ್ದ ವೇಳೆಯಲ್ಲಿ ಮಣ್ಣು ಕುಸಿದು ಈ ಘಟನೆ ನಡೆದಿದೆ. ಜೊತೆಗೆ ತೆರಳಿದ್ದವರು ಈ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದ ನಂತರ ಒಂದು ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಮತ್ತೊಬ್ಬ ಮಹಿಳೆಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಇದನ್ನೂ ಓದಿ: ‘ಅಣ್ಣ.. ಪ್ಲೀಸ್ ನನ್ನನ್ನು ಕಾಪಾಡು’... ಸೆಕ್ಸ್ ರಾಕೆಟ್ಗೆ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ ಪೊಲೀಸರು!