ಸೂರತ್: ಗುಜರಾತ್ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಬಸ್ಗಳ ನಡುವೆ ಡಿಕ್ಕಿ ಸಂಭವಿಸಿ 20 ಜನ ಗಾಯಗೊಂಡಿರುವ ಘಟನೆ ಬಾರ್ಡೋಲಿಯಲ್ಲಿ ನಡೆದಿದೆ.
ಮಹಾರಾಷ್ಟ್ರದಿಂದ ಸೂರತ್ಗೆ ಪ್ರಯಾಣಿಸುತ್ತಿದ್ದ ಐಷಾರಾಮಿ ಬಸ್ ಮತ್ತು ಮತ್ತೊಂದು ಐಷಾರಾಮಿ ಬಸ್ಗೆ ಬಾರ್ಡೋಲಿಯಾದ ರೈಲ್ವೆ ಗೇಟ್ ಬಳಿ ಡಿಕ್ಕಿ ಹೊಡೆದಿದೆ. ಕಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ಎದುರಿಗೆ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದ್ದಾನೆ.
ಸಿನಿಮೀಯ ಸ್ಟೈಲ್ನಲ್ಲಿ ಬಸ್ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಅದರ ರಭಸಕ್ಕೆ ಬಸ್ಗಳ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಜನರ ಪೈಕಿ 20 ಪ್ರಯಾಣಿಕರಿಗೆ ಗಾಯಗಳಾಗಿವೆ.
ಓದಿಗಾಗಿ: ಗುಜರಾತ್ನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ...ನಾಲ್ವರು ಸಾವು!
ಸುದ್ದಿ ತಿಳಿದ ಕೂಡಲೇ ಪಾಲ್ಸಾನಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡರು. ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. 20 ಜನ ಗಾಯಾಳುಗಳಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಘಟನೆ ಕುರಿತು ಪಾಲ್ಸಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಓದಿಗಾಗಿ: ವಡೋದರಾ ರಸ್ತೆ ಅಪಘಾತ... ಸಾವಿನ ಸಂಖ್ಯೆ 11ಕ್ಕೆ ಏರಿಕೆ!
ತಡರಾತ್ರಿ ವಡೋದರಾ ಮತ್ತು ಇಂದು ಬೆಳಗ್ಗೆ ಸುರೇಂದ್ರನಗರ ಜಿಲ್ಲೆಗಳಲ್ಲಿ ರಸ್ತೆ ಅಪಘಾತ ಸಂಭವಿಸಿ ಒಟ್ಟು 15 ಜನ ಮೃತಪಟ್ಟಿದ್ದಾರೆ. ಈಗ ಸೂರತ್ನಲ್ಲಿ ರಸ್ತೆ ಅಪಘಾತ ಸಂಭವಿಸಿ 20 ಜನ ಗಾಯಗೊಂಡಿದ್ದಾರೆ.