ETV Bharat / bharat

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ ಕೇಸ್​​: ಆರೋಪಿಗೆ 20 ವರ್ಷ ಜೈಲು ಶಿಕ್ಷೆ! - ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ ಕೇಸ್​

2017ರಲ್ಲಿ ಹೈದರಾಬಾದ್​ನಲ್ಲಿ ನಡೆದಿದ್ದ ಆರು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಸೆಷನ್ಸ್​ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

Rape case
Rape case
author img

By

Published : Jan 6, 2021, 8:42 PM IST

Updated : Jan 6, 2021, 9:08 PM IST

ಹೈದರಾಬಾದ್​: ಆರು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್​ನ ನಾಂಪಲ್ಲಿ ವಿಶೇಷ ಸೆಷನ್ಸ್​ ನ್ಯಾಯಾಲಯ ಆರೋಪಿಗೆ 20 ವರ್ಷ ಜೈಲು ಸಜೆ ವಿಧಿಸಿ ತೀರ್ಪು ನೀಡಿದೆ.

ಉತ್ತರ ಪ್ರದೇಶದವನಾಗಿದ್ದ ಕಮಲ್​ ಭನ್​ ಅಬಿಡ್ಸ್​​ ಶಾಲೆಯಲ್ಲಿ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದನು. 2017ರಲ್ಲಿ ವಿದ್ಯಾರ್ಥಿನಿ ಶಾಲೆಯಲ್ಲಿ ಓದುತ್ತಿದ್ದ ವೇಳೆ ಆಕೆಯ ಮೇಲೆ ಅತ್ಯಾಚಾರ ಯತ್ನ ನಡೆಸಿದ್ದನು. ಹೆತ್ತವರ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು ಆರೋಪಿಯ ಬಂಧನ ಮಾಡಿದ್ದರು.

ಅದರ ತನಿಖೆ ನಡೆಸಿರುವ ನಾಂಪಲ್ಲಿ ವಿಶೇಷ ಸೆಷನ್ಸ್​ ಕೋರ್ಟ್​ ಇಂದು ಮಹತ್ವದ ತೀರ್ಪು ನೀಡಿದೆ. ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದೆ.

Last Updated : Jan 6, 2021, 9:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.