ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,067 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ದೈನಂದಿನ ಪಾಸಿಟಿವಿ ದರ ಶೇ. 0.49ರಷ್ಟು ಹೆಚ್ಚಾಗಿದ್ದು, ಸಾಪ್ತಾಹಿಕ ಪಾಸಿಟಿವಿ ದರ ಶೇ.38ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಓದಿ: India Corona: ದೇಶದಲ್ಲಿ ಹೊಸದಾಗಿ 796 ಸೋಂಕಿತರು ಪತ್ತೆ, 19ಸಾವು
ಮಂಗಳವಾರ 2,067 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಿನ್ನೆ ಒಂದೇ ದಿನ 40 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ.98.76 ರಷ್ಟಿದೆ.
ಓದಿ: ಭಾರತದಲ್ಲಿ ಹೊಸದಾಗಿ 949 ಮಂದಿಗೆ ಸೋಂಕು, ಆರು ಮಂದಿ ಮೃತ
ದೇಶದಲ್ಲಿ 12,340 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 1,547 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,25,13,248 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮತ್ತೊಂದೆಡೆ ದೇಶದಲ್ಲಿ ಲಸಿಕೆ ನೀಡುವ ಕಾರ್ಯ ಮುಂದುವರೆದಿದ್ದು, ಇದುವರೆಗೆ ರಾಷ್ಟ್ರವ್ಯಾಪಿ ಒಟ್ಟು 186.90 ಕೋಟಿ ವ್ಯಾಕ್ಸಿನ್ ಡೋಸ್ ನೀಡಲಾಗಿದೆ.