ಮುಂಬೈ: ಮಹಾರಾಷ್ಟ್ರದ ನಾಶಿಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆಯಿಂದಾಗಿ 22 ರೋಗಿಗಳು ಸಾವನ್ನಪ್ಪಿದ್ದಾರೆ. ಡಾ.ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಟ್ಯಾಂಕರ್‌ಗಳನ್ನು ತುಂಬುತ್ತಿರುವಾಗ ಆಕ್ಸಿಜನ್ ಸೋರಿಕೆಯಾಗಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಆಸ್ಪತ್ರೆಯಲ್ಲಿನ 80 ರೋಗಿಗಳ ಪೈಕಿ 31 ರೋಗಿಗಳನ್ನ ಇದೀಗ ಬೇರೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಉಪಸ್ಥಿತವಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಇದರ ಜತೆಗೆ ಅಧಿಕಾರಿಗಳು ಸ್ಥಳದಲ್ಲಿದ್ದು, ಸೋರಿಕೆಯನ್ನು ತಡೆಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.
ಘಟನೆ ಬಗ್ಗೆ ಮಾತನಾಡಿರುವ ಸಚಿವ ರಾಜೇಂದ್ರ ಶಿಂಗಾನೆ, ಇದೊಂದು ದುರದೃಷ್ಟಕರ ಘಟನೆ. ಪ್ರಾಥಮಿಕ ಮಾಹಿತಿ ಪ್ರಕಾರ 22 ಜನರು ಸಾವನ್ನಪ್ಪಿದ್ದಾರೆ. ಸಂಪೂರ್ಣ ವರದಿ ನೀಡುವಂತೆ ಈಗಾಗಲೇ ಸೂಚನೆ ನೀಡಿದ್ದು, ತನಿಖೆಗೆ ಆದೇಶ ನೀಡಲಾಗಿದೆ ಎಂದಿದ್ದಾರೆ. ಇದಕ್ಕೆ ಕಾರಣರಾದವರನ್ನ ಸುಮ್ಮನೆ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
-
#WATCH | An Oxygen tanker leaked while tankers were being filled at Dr Zakir Hussain Hospital in Nashik, Maharashtra. Officials are present at the spot, operation to contain the leak is underway. Details awaited. pic.twitter.com/zsxnJscmBp
— ANI (@ANI) April 21, 2021 " class="align-text-top noRightClick twitterSection" data="
">#WATCH | An Oxygen tanker leaked while tankers were being filled at Dr Zakir Hussain Hospital in Nashik, Maharashtra. Officials are present at the spot, operation to contain the leak is underway. Details awaited. pic.twitter.com/zsxnJscmBp
— ANI (@ANI) April 21, 2021#WATCH | An Oxygen tanker leaked while tankers were being filled at Dr Zakir Hussain Hospital in Nashik, Maharashtra. Officials are present at the spot, operation to contain the leak is underway. Details awaited. pic.twitter.com/zsxnJscmBp
— ANI (@ANI) April 21, 2021
ಸುಮಾರು 20 ಸಾವಿರ ಲೀಟರ್ ಆಕ್ಸಿಜನ್ ಸೋರಿಕೆಯಾಗಿದೆ ಎಂದು ತಿಳಿದು ಬಂದಿದ್ದು, ಆಸ್ಪತ್ರೆಯಲ್ಲಿ 171 ರೋಗಿಗಳು ಆಕ್ಸಿಜನ್ನಲ್ಲಿದ್ದು, 21 ರೋಗಿಗಳು ವೆಂಟಿಲೇಟರ್ನಲ್ಲಿದ್ದರು. ಆಮ್ಲಜನಕ ಸೋರಿಕೆಯಿಂದಾಗಿ 61 ರೋಗಿಗಳ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಬೇರೆ ಆಸ್ಪತ್ರೆಗಳಿಗೆ ರವಾನೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ತೀವ್ರ ಸಂತಾಪ
ಆಕ್ಸಿಜನ್ ಸೋರಿಕೆ ದುರಂತಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದು, ದುರಂತದಿಂದ ಹೃದಯ ಕದಡುವಂತಿದೆ. ಸಾವನ್ನಪ್ಪಿದವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
5 ಲಕ್ಷ ರೂ. ಪರಿಹಾರ ಘೋಷಣೆ
ಆಮ್ಲಜನಕ ಸೋರಿಕೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಜತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.