ETV Bharat / bharat

Horrible Road Accident: ಪಲ್ಟಿಯಾಗಿ ಹೊತ್ತಿ ಉರಿದ ಬಸ್​.. 25 ಜನ ಸಜೀವ ದಹನ, ಸಿಎಂ ಪರಿಹಾರ ಘೋಷಣೆ! - ಎಂಟು ಪ್ರಯಾಣಿಕರು ಉಳಿದಿದ್ದು ಹೀಗೆ

Horrible Road Accident: ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 25 ಜನ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

25 People Died In Horrible Road Accident  People Died In Road Accident On Samruddhi Highway  Samruddhi Highway in Maharashtra  Horrible Road Accident  ಚಲಿಸುತ್ತಿದ್ದ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ  25 ಜನ ಸುಟ್ಟು ಭಸ್ಮ  ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ  25 ಜನ ಸುಟ್ಟು ಕರಕಲ  ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇ

author img

By

Published : Jul 1, 2023, 7:01 AM IST

Updated : Jul 1, 2023, 9:48 AM IST

25 ಜನ ಸಜೀವ ದಹನ

ಬುಲ್ಧಾನ, ಮಹಾರಾಷ್ಟ್ರ: ಬುಲ್ಧಾನದಲ್ಲಿ ಪ್ರಯಾಣಿಕರ ಬಸ್‌ನ ಭೀಕರ ಅಪಘಾತ (Horrible Road Accident) ಸಂಭವಿಸಿದೆ. ಅಪಘಾತದಲ್ಲಿ 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಶನಿವಾರ ನಸುಕಿನ ಜಾವ 2 ಗಂಟೆಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಡಿವೈಡರ್​ಗೆ ಡಿಕ್ಕಿ, ಹೊತ್ತಿ ಉರಿದ ಬಸ್​: ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ವಿದರ್ಭ ಟ್ರಾವೆಲ್ಸ್​ಗೆ ಸೇರಿದ್ದಾಗಿದೆ. ಸಿಂಧಖೇಡರಾಜ ಸಮೀಪದ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ನಂತರ ಕೇವಲ ಎಂಟು ಪ್ರಯಾಣಿಕರು ಮಾತ್ರ ಸುರಕ್ಷಿತವಾಗಿ ಹೊರಬರಲು ಸಾಧ್ಯವಾಗಿದೆ. 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಬಸ್​ಗೆ ಬೆಂಕಿ ಬಿದ್ದ ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬಸ್ಸಿನಿಂದ 25 ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಜನರು ಪ್ರಯಾಣಿಸುತ್ತಿದ್ದರು. 8 ಜನರನ್ನು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.

ಸುರಕ್ಷಿತವಾಗಿ ಪಾರಾದವರಲ್ಲಿ ಚಾಲಕ ಮತ್ತು ಸಹಾಯಕ ಸೇರಿದ್ದಾರೆ. ಇದೇ ವೇಳೆ ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಈ ಪ್ರಯಾಣಿಕರಲ್ಲಿ ಹೆಚ್ಚಿನವರು ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಂಟು ಪ್ರಯಾಣಿಕರು ಉಳಿದಿದ್ದು ಹೀಗೆ: ಪೊಲೀಸರು ಹಾಗೂ ಸ್ಥಳದಲ್ಲಿದ್ದವರ ಪ್ರಕಾರ ಬಸ್ ಮೊದಲು ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಬಳಿಕ ಬದುಕುಳಿದ ಪ್ರಯಾಣಿಕರು ಬಸ್ಸಿನ ಬಾಗಿಲು ಒದ್ದು ಮತ್ತು ಗಾಜುಗಳನ್ನು ಒಡೆದು ಹೊರಬಂದಿದ್ದಾರೆ. ಅಪಘಾತದ ನಂತರ ಬಸ್ಸಿನಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ವೇಳೆ ಬಸ್​ನ ಇಂಜಿನ್​ನಲ್ಲಿ ಸ್ಪಾರ್ಕ್​ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬಸ್ಸಿನಿಂದ ಹೊರತೆಗೆದ ಮೃತದೇಹಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆ ಕುರಿತು ಬುಲ್ಧಾನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸುವ ಕಾರ್ಯವನ್ನು ಕೈಗೊಂಡಿದ್ದಾರೆ. ಸುದ್ದಿ ತಿಳಿದ ಕುಟುಂಬಸ್ಥರು ಬುಲ್ಧಾನ್​ನ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಘಟನಾ ಸ್ಥಳಕ್ಕೆ ಸಿಎಂ ಭೇಟಿ, ಪರಿಹಾರ ಘೋಷಣೆ: ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ನ ಭೀಕರ ಅಪಘಾತದ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಮತ್ತು ಅವರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು, ಈ ದುರದೃಷ್ಟಕರ ಘಟನೆಯಲ್ಲಿ ಮೃತರ ಸಂಬಂಧಿಕರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂಪಾಯಿಗಳ ನೆರವು ಘೋಷಿಸಿದ್ದಾರೆ.

ಈ ಭೀಕರ ಅಪಘಾತದಿಂದ ನೊಂದಿದ್ದೇನೆ ಎಂದು ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಅಪಘಾತದ ಮಾಹಿತಿ ಬಂದ ತಕ್ಷಣ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬುಲ್ಧಾನದ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದರು. ಅಪಘಾತಕ್ಕೀಡಾದವರಿಗೆ ತಕ್ಷಣದ ನೆರವು ನೀಡುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ, ಗಾಯಾಳುಗಳಿಗೆ ಸರ್ಕಾರಿ ವೆಚ್ಚದಲ್ಲಿ ತಕ್ಷಣದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಅಪಘಾತದ ಮಾಹಿತಿ ತಿಳಿದ ತಕ್ಷಣ ಹೆದ್ದಾರಿಗೆ ನಿಯೋಜಿಸಲಾದ ತುರ್ತು ವೈದ್ಯಕೀಯ ಸೇವಾ ತಂಡ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಗಾಯಗೊಂಡ ಪ್ರಯಾಣಿಕರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಿಎಂ ಏಕನಾಥ್​ ಶಿಂಧೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಓದಿ: Kenya road crash: ಕೀನ್ಯಾದಲ್ಲಿ ಭೀಕರ ದುರಂತ, 48 ಜನರ ಬಲಿ ಪಡೆದ ಟ್ರಕ್​

Last Updated : Jul 1, 2023, 9:48 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.