ETV Bharat / bharat

ಪ.ಬಂಗಾಳ ಚುನಾವಣೆ.. ದೀದಿ ನಾಡಲ್ಲಿ ನಾಮಪತ್ರ ಸಲ್ಲಿಸಿದ ಕ್ರಿಮಿನಲ್​ಗಳು ಇಷ್ಟು.. - criminal background

ಬಂಗಾಳದ 30 ಕ್ಷೇತ್ರಗಳಲ್ಲಿ ಏಳು (23%) 'ರೆಡ್ ಅಲರ್ಟ್' ಕ್ಷೇತ್ರಗಳಾಗಿವೆ, ಅಲ್ಲಿ ಮೂರು ಅಥವಾ ಹೆಚ್ಚಿನ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಬಂಗಾಳ ಚುನಾವಣೆಯ ಮೊದಲನೇ ಹಂತದಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ರಾಜಕೀಯ ಪಕ್ಷಗಳ ಮೇಲೆ ಸುಪ್ರೀಂಕೋರ್ಟ್‌ನ ನಿರ್ದೇಶನಗಳು ಯಾವುದೇ ಪರಿಣಾಮ ಬೀರಿಲ್ಲ..

ADR
ಪ.ಬಂಗಾಳ ಚುನಾವಣೆ
author img

By

Published : Mar 21, 2021, 2:29 PM IST

ನವದೆಹಲಿ : ಪಶ್ಚಿಮ ಬಂಗಾಳದ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಶೇ.25ರಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಈ ಬಗ್ಗೆ ವರದಿ ನೀಡಿದೆ. ಮೊದಲ ಹಂತದ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಿರುವ ಎಲ್ಲಾ 191 ಅಭ್ಯರ್ಥಿಗಳನ್ನು ವಿಶ್ಲೇಷಿಸುವ ವರದಿಯನ್ನು ಬಿಡುಗಡೆ ಮಾಡಿದೆ. ಹೆಚ್ಚಿನ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಿರುವುದರಿಂದ, ಎಡಿಆರ್ ವರದಿಯು ಅವರ ಚುನಾವಣಾ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ ಮತ್ತು ಶೈಕ್ಷಣಿಕ ಅರ್ಹತೆಗಳ ಬಗ್ಗೆ ಮಾಹಿತಿ ನೀಡಿದೆ.

25% ಅಭ್ಯರ್ಥಿಗಳು ಕ್ರಿಮಿನಲ್ ದಾಖಲೆಗಳನ್ನು ಹೊಂದಿದ್ದಾರೆ. ಸಿಪಿಐ(ಎಂ) ಕಣಕ್ಕಿಳಿದ ಅಭ್ಯರ್ಥಿಗಳಲ್ಲಿ 50%ಕ್ಕಿಂತ ಹೆಚ್ಚು ಜನರು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಇದು ಎಲ್ಲಾ ಪಕ್ಷಗಳಿಗಿಂತ ಅತ್ಯಧಿಕ ಅನುಪಾತವಾಗಿದೆ.

ಎಡಿಆರ್ ವರದಿಯ ಪ್ರಕಾರ, 191 ಅಭ್ಯರ್ಥಿಗಳ ಪೈಕಿ, ಒಟ್ಟು 48 ಅಭ್ಯರ್ಥಿಗಳು ಅಂದರೆ 191 ಅಭ್ಯರ್ಥಿಗಳಲ್ಲಿ 25%ರಷ್ಟು ಜನ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣದ ಹಿನ್ನೆಲೆ ಹೊಂದಿದ್ದಾರೆ. 42 ಮಂದಿ (22%) ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ.

12 ಅಭ್ಯರ್ಥಿಗಳು ಮಹಿಳೆಯರ ಮೇಲಿನ ಅಪರಾಧಕ್ಕೆ ಸಂಬಂಧಿಸಿದ ಪ್ರಕರಣಗಳ ಹಿನ್ನೆಲೆ ಹೊಂದಿದ್ದಾರೆ. 12 ಅಭ್ಯರ್ಥಿಗಳಲ್ಲಿ ಓರ್ವ ಅಭ್ಯರ್ಥಿ ಅತ್ಯಾಚಾರ ಆರೋಪದ ಸಂಬಂಧಿಸಿದ ಕೇಸ್​ ಎದುರಿಸುತ್ತಿದ್ದಾರೆ. 8 ಅಭ್ಯರ್ಥಿಗಳು ತಮ್ಮ ವಿರುದ್ಧ ಕೊಲೆ ಪ್ರಕರಣಗಳನ್ನು ಘೋಷಿಸಿದ್ದಾರೆ. 19 ಅಭ್ಯರ್ಥಿಗಳು ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಕೇಸ್​ಗಳಲ್ಲಿ ಆರೋಪಿಗಳಾಗಿದ್ದಾರೆ.

ಬಂಗಾಳದ 30 ಕ್ಷೇತ್ರಗಳಲ್ಲಿ ಏಳು (23%) 'ರೆಡ್ ಅಲರ್ಟ್' ಕ್ಷೇತ್ರಗಳಾಗಿವೆ, ಅಲ್ಲಿ ಮೂರು ಅಥವಾ ಹೆಚ್ಚಿನ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಬಂಗಾಳ ಚುನಾವಣೆಯ ಮೊದಲನೇ ಹಂತದಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ರಾಜಕೀಯ ಪಕ್ಷಗಳ ಮೇಲೆ ಸುಪ್ರೀಂಕೋರ್ಟ್‌ನ ನಿರ್ದೇಶನಗಳು ಯಾವುದೇ ಪರಿಣಾಮ ಬೀರಿಲ್ಲ ಎಂದು ಎಡಿಆರ್ ಹೇಳುತ್ತದೆ. ಯಾಕೆಂದರೆ, ಅವರು ಕ್ರಿಮಿನಲ್ ಪ್ರಕರಣಗಳೊಂದಿಗೆ ಸುಮಾರು 25% ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಹಳೆಯ ಚಾಳಿಯನ್ನೇ ಪಕ್ಷಗಳು ಮುಂದುವರಿಸಿವೆ ಎಂದು ವರದಿ ಹೇಳಿದೆ.

ಪಶ್ಚಿಮ ಬಂಗಾಳ ಹಂತ 1ರ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಪ್ರಮುಖ ಪಕ್ಷಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿರುವ ಶೇ.33-56ರಷ್ಟು ಅಭ್ಯರ್ಥಿಗಳಿಗೆ ಟಿಕೆಟ್ ನೀಡಿವೆ. ಫೆಬ್ರವರಿ 13, 2020ರ ಸುಪ್ರೀಂಕೋರ್ಟ್ ತನ್ನ ನಿರ್ದೇಶನಗಳಲ್ಲಿ ರಾಜಕೀಯ ಪಕ್ಷಗಳಿಗೆ ಅಂತಹ ಆಯ್ಕೆಗೆ ಕಾರಣಗಳನ್ನು ನೀಡುವಂತೆ ಸೂಚಿಸಿತ್ತು ಮತ್ತು ಕ್ರಿಮಿನಲ್ ಪೂರ್ವಾಪರಗಳಿಲ್ಲದ ಇತರ ವ್ಯಕ್ತಿಗಳಿಗೆ ಏಕೆ ಟಿಕೆಟ್​ ನೀಡುತ್ತಿಲ್ಲ ಎಂಬುದಕ್ಕೆ ಉತ್ತರ ಕೇಳಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.