ಕೇರಳ/ಕೊಚ್ಚಿ : ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ) ಮತ್ತು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಜಂಟಿ ಕಾರ್ಯಾಚರಣೆ ನಡೆಸಿ ಕೊಚ್ಚಿನ್ ಪೋರ್ಟ್ ಟ್ರಸ್ಟ್‌ನಲ್ಲಿ ಕಂಟೈನರ್‌ನಲ್ಲಿ ಬಚ್ಚಿಟ್ಟಿದ್ದ ಅಪಾರ ಪ್ರಮಾಣದ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ.
ರಾತ್ರಿ ವೇಳೆ ಬಂದರಿನಿಂದ ಹೊರಡುವ ಹಡಗಿನಲ್ಲಿ ಸುಮಾರು 2,500 ಕೆಜಿ ತೂಕದ ರಕ್ತ ಚಂದನವನ್ನ ದುಬೈಗೆ ಕಳ್ಳಸಾಗಣೆ ಮಾಡಲು ಪ್ರಯತ್ನಿಸಲಾಗುತ್ತಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಡಿಆರ್‌ಐ ಮತ್ತು ಕಸ್ಟಮ್ಸ್ ಅಧಿಕಾರಿಗಳು ಕೋಟ್ಯಂತರ ರೂ. ಮೌಲ್ಯದ ಸ್ವತ್ತನ್ನ ವಶಪಡಿಸಿಕೊಂಡಿದ್ದಾರೆ.
ಕಳ್ಳಸಾಗಣೆ ಮಾಡಲು ಯತ್ನಿಸಿದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಸದ್ಯದಲ್ಲೇ ಆರೋಪಿಯನ್ನು ಬಂಧಿಸಲಾಗುವುದು. ಈಗಾಗಲೇ ಬಂದರಿನ ಬಳಿ ಕಂಟೈನರ್‌ನಲ್ಲಿ ಅಡಗಿಸಿಟ್ಟಿದ್ದ ರಕ್ತ ಚಂದನ ಮರದ ದಿಮ್ಮಿಗಳನ್ನ ವಶಪಡಿಸಿಕೊಳ್ಳಲಾಗಿದೆ. ಈ ಮರದ ದಿಮ್ಮಿಗಳನ್ನು ಕೇರಳದ ಹೊರಗಿನಿಂದ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಮೂವರು ಹೆಂಡ್ತಿಯರ ಗಂಡನ ಕೊಲೆ ಪ್ರಕರಣ: ಪತಿಯ ಹತ್ಯೆಗೆ 10 ಲಕ್ಷ ಸುಪಾರಿ ಕೊಟ್ಟಿದ್ದು ಎರಡನೇ ಪತ್ನಿ!