ETV Bharat / bharat

ಆವಾಸ್ ಯೋಜನೆಯಡಿಯಲ್ಲಿ ಮೂರು ಕೋಟಿ ಮನೆಗಳ ನಿರ್ಮಾಣ : ಪ್ರಧಾನಿ ಮೋದಿ

author img

By

Published : Apr 8, 2022, 9:11 AM IST

ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಪ್ರತಿ ಮನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಸಂಪರ್ಕ, ನೀರಿನ ಸಂಪರ್ಕ ಮತ್ತು ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಲಾಗುತ್ತದೆ..

3 crore houses constructed under Awas Yojana, PM Modi calls it 'symbol of women empowerment'
ಆವಾಸ್ ಯೋಜನೆಯಡಿಯಲ್ಲಿ ಮೂರು ಕೋಟಿ ಮನೆಗಳ ನಿರ್ಮಾಣ: ಪ್ರಧಾನಿ ಮೋದಿ

ನವದೆಹಲಿ : ಬಡವರಿಗಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಪಕ್ಕಾ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಿಳಿಸಿದ್ದಾರೆ. ಮೂಲಸೌಕರ್ಯಗಳಿರುವ ಮನೆಗಳು ಮಹಿಳಾ ಸಬಲೀಕರಣದ ಸಂಕೇತವಾಗಿವೆ ಎಂದಿದ್ದಾರೆ. ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆ ನೀಡುವ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ.

ಜನರ ಸಹಭಾಗಿತ್ವದಿಂದ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಗ್ರಾಮೀಣ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2.52 ಕೋಟಿ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಇದಕ್ಕಾಗಿ 1.95 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ನಗರ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಇದುವರೆಗೆ 58 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ.

ಈ ಉದ್ದೇಶಕ್ಕಾಗಿ 1.18 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಮೋದಿ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಪ್ರತಿ ಮನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಸಂಪರ್ಕ, ನೀರಿನ ಸಂಪರ್ಕ ಮತ್ತು ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಲಾಗುತ್ತದೆ.

देश के हर गरीब को पक्का मकान देने के संकल्प में हमने एक अहम पड़ाव तय कर लिया है। जन-जन की भागीदारी से ही तीन करोड़ से ज्यादा घरों का निर्माण संभव हो पाया है। मूलभूत सुविधाओं से युक्त ये घर आज महिला सशक्तिकरण का प्रतीक भी बन चुके हैं। pic.twitter.com/6jmMcMs21J

— Narendra Modi (@narendramodi) April 8, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಬಿಸಿಯೂಟ ನೌಕರರಿಗೆ ಗುಡ್​​ ನ್ಯೂಸ್ ​​: ಗೌರವಧನ ₹1,000 ಹೆಚ್ಚಿಸಿ ಆದೇಶ

ನವದೆಹಲಿ : ಬಡವರಿಗಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಪಕ್ಕಾ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಿಳಿಸಿದ್ದಾರೆ. ಮೂಲಸೌಕರ್ಯಗಳಿರುವ ಮನೆಗಳು ಮಹಿಳಾ ಸಬಲೀಕರಣದ ಸಂಕೇತವಾಗಿವೆ ಎಂದಿದ್ದಾರೆ. ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆ ನೀಡುವ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ.

ಜನರ ಸಹಭಾಗಿತ್ವದಿಂದ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಗ್ರಾಮೀಣ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2.52 ಕೋಟಿ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಇದಕ್ಕಾಗಿ 1.95 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ನಗರ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಇದುವರೆಗೆ 58 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ.

ಈ ಉದ್ದೇಶಕ್ಕಾಗಿ 1.18 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಮೋದಿ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಪ್ರತಿ ಮನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಸಂಪರ್ಕ, ನೀರಿನ ಸಂಪರ್ಕ ಮತ್ತು ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಲಾಗುತ್ತದೆ.

  • देश के हर गरीब को पक्का मकान देने के संकल्प में हमने एक अहम पड़ाव तय कर लिया है। जन-जन की भागीदारी से ही तीन करोड़ से ज्यादा घरों का निर्माण संभव हो पाया है। मूलभूत सुविधाओं से युक्त ये घर आज महिला सशक्तिकरण का प्रतीक भी बन चुके हैं। pic.twitter.com/6jmMcMs21J

    — Narendra Modi (@narendramodi) April 8, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಬಿಸಿಯೂಟ ನೌಕರರಿಗೆ ಗುಡ್​​ ನ್ಯೂಸ್ ​​: ಗೌರವಧನ ₹1,000 ಹೆಚ್ಚಿಸಿ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.