ETV Bharat / bharat

ಭೀಕರ ರಸ್ತೆ ಅಪಘಾತ: ಮೂವರು ಸಾವು, ಆರು ಮಂದಿ ಸ್ಥಿತಿ ಗಂಭೀರ - car accident at andhra pradesh

3 died in car accident at andra pradesh
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ: ಮೂವರ ಸಾವು, ಹಲವರು ಗಂಭೀರ
author img

By

Published : Dec 10, 2020, 7:54 AM IST

Updated : Dec 10, 2020, 9:41 AM IST

07:49 December 10

ಕಾರು-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ದುರ್ಮರಣಕ್ಕೀಡಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಭೀಕರ ರಸ್ತೆ ಅಪಘಾತ

ಕೃಷ್ಣ(ಆಂಧ್ರ ಪ್ರದೇಶ): ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ತಕ್ಕೆಲ್ಲಪಡು ಗ್ರಾಮದ ಬಳಿ ಕಾರು-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. 

ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಮಚಾರ್ಲಾ ಶ್ಯಾಮ್, ಶಾರದಾ, ಶ್ಯಾಮಲಾ ಎಂಬುವರು ಮೃತಪಟ್ಟಿದ್ದಾರೆ. ಇವರು ಮಧಿರಾ, ಖಮ್ಮಂ ನಿವಾಸಗಳಾಗಿದ್ದಾರೆ ತಿಳಿದುಬಂದಿದೆ.  

ಈ ಸುದ್ದಿಯನ್ನೂ ಓದಿ: ಜಾರ್ಖಂಡ್​ನ​ಲ್ಲಿ ಪೈಶಾಚಿಕ ಕೃತ್ಯ: ಗಂಡನ ಎದುರೇ 17 ಕಾಮುಕರಿಂದ ಮಹಿಳೆ ಮೇಲೆ ಗ್ಯಾಂಗ್​ ರೇಪ್​!

ಚಾಲಕ ಸೇರಿದಂತೆ 9 ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ವೇಮುಲವಾಡ ದೇವಸ್ಥಾನದಿಂದ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ. ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಖಮ್ಮಂ ಆಸ್ಪತ್ರೆಗೆ ದಾಖಲಿಸಲಾಗಿದೆ.  

Last Updated : Dec 10, 2020, 9:41 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.