ನವದೆಹಲಿ: ಅಫ್ಘಾನಿಸ್ತಾನದಲ್ಲಿ ನಡೆಯುತ್ತಿದ್ದ ಮೂಲಸೌಕರ್ಯ ಯೋಜನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಭಾರತೀಯ ಎಂಜಿನಿಯರ್ಗಳನ್ನು ರಕ್ಷಿಸಲಾಗಿದೆ ಎಂದು ಕಾಬೂಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ.
ಅಫ್ಘಾನಿಸ್ತಾನದಲ್ಲಿ ಹಿಂಸಾತ್ಮಕ ಸಂಘರ್ಷ ನಡೆಯುತ್ತಿದ್ದು, ಇಲ್ಲಿರುವ ಭಾರತೀಯರೆಲ್ಲರೂ ರಾಯಭಾರ ಕಚೇರಿಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಅಫ್ಘನ್ ಪಡೆಗಳ ನಿಯಂತ್ರಣದಲ್ಲಿ ಇಲ್ಲದ ಸ್ಥಳದಲ್ಲಿ ಡ್ಯಾಮ್ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಎಂಜಿನಿಯರ್ಗಳನ್ನು ರಕ್ಷಣೆ ಮಾಡಲಾಗಿದೆ.
ಜೂನ್ 29, ಜುಲೈ 24 ಮತ್ತು ಆಗಸ್ಟ್ 10ರಂದು ಭಾರತೀಯ ರಾಯಭಾರ ಕಚೇರಿ ಅಲ್ಲಿನ ಭಾರತೀಯರಿಗೆ ಪ್ರತ್ಯೇಕ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದು, ಕಾಲಕಾಲಕ್ಕೆ ನೀಡುವ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಡ್ಡಾಯವಾಗಿ ತಿಳಿಸಿದೆ.
'ಭಾರತೀಯರು ದೇಶಕ್ಕೆ ಮರಳಿ'
ಮಂಗಳವಾರದ ರಾಯಭಾರ ಕಚೇರಿ ತಾನು ನೀಡಿದ ಸಲಹೆಯಲ್ಲಿ ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ಹೆಚ್ಚಳವಾಗುತ್ತಿದೆ. ಭಾರತದಿಂದ ವಾಯು ಸೇವೆಗಳನ್ನು ನಿಲ್ಲಿಸುವ ಮೊದಲೇ ದೇಶಕ್ಕೆ ಮರಳಿ ಎಂದು ಸೂಚನೆ ನೀಡಿದೆ.
ಅಫ್ಘಾನಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪನಿಗಳಿಗೂ ತಮ್ಮ ಉದ್ಯೋಗಿಗಳನ್ನು ಕಚೇರಿಗಳಿಂದ ಮತ್ತು ಯೋಜನಾ ಸ್ಥಳಗಳಿಂದ ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಮತ್ತು ಭಾರತಕ್ಕೆ ಮರಳಲು ವ್ಯವಸ್ಥೆ ಮಾಡಬೇಕೆಂದು ಕಟ್ಟುನಿಟ್ಟಿನ ಸಲಹೆ ನೀಡಿದೆ.
ಕಳೆದ ತಿಂಗಳು ಕಂದಹಾರ್‌ನಲ್ಲಿ ಪುಲಿಟ್ಜರ್ ಪ್ರಶಸ್ತಿ ವಿಜೇತ ಭಾರತೀಯ ಛಾಯಾಚಿತ್ರ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಅವರ ಹತ್ಯೆಯ ಕುರಿತೂ ಸಲಹೆಯಲ್ಲಿ ಉಲ್ಲೇಖಿಸಲಾಗಿದ್ದು, ಆಫ್ಘನ್ನ ಪತ್ರಕರ್ತರಿಗೂ ಹೆಚ್ಚಿನ ಅಪಾಯದ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನದ ಮೂರನೇ ಒಂದು ಭಾಗವೀಗ ತಾಲಿಬಾನ್ ವಶ: ಯುದ್ಧಪೀಡಿತ ದೇಶದ ಸಂಪೂರ್ಣ ಚಿತ್ರಣ ಇಲ್ಲಿದೆ..