ಮಥುರಾ (ಉತ್ತರ ಪ್ರದೇಶ): ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆ ಸೇರಿದಂತೆ ಮೂವರು ಮೃತಪಟ್ಟು ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಗ್ರಾದಿಂದ ನೋಯ್ಡಾಕ್ಕೆ ಹೋಗುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಗಾಯಗೊಂಡ ಐವರನ್ನು ಆಗ್ರಾದ ಎಸ್‌ಎನ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತವಾದ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದ್ದು, ನಂತರವಷ್ಟೇ ಹೆಚ್ಚಿನ ಮಾಹಿತಿ ಸಿಗಲಿದೆ.